ನವದೆಹಲಿ: ವಿಜಯದಶಮಿ, ರಾವಣ ಪ್ರತಿಕೃತಿ ದಹಿಸಿದ ಪ್ರಧಾನಿ ಮೋದಿ!
ರಾಷ್ಟ್ರ ರಾಜಧಾನಿ ನವದೆಹಲಿಯ ದ್ವಾರಕಾ ಸೆಕ್ಟರ್ 10 ರ ರಾಮ್ ಲೀಲಾ ಮೈದಾನದಲ್ಲಿ ನಡೆದ ‘ವಿಜಯ ದಶಮಿ ರಾವಣ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ದ್ವಾರಕಾ ಸೆಕ್ಟರ್ 10 ರ ರಾಮ್ ಲೀಲಾ ಮೈದಾನದಲ್ಲಿ ನಡೆದ ‘ವಿಜಯ ದಶಮಿ ರಾವಣ ಪ್ರತಿಕೃತಿ ದಹನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು.
ಶ್ರೀ ರಾಮಲೀಲಾ ಸೊಸೈಟಿ ಆಯೋಜಿಸಿದ 11ನೇ ರಾಮಲೀಲಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ, ಬಾಣ ಬಿಡುವ ಮೂಲಕ ರಾವಣನ ಪ್ರತಿಕೃತಿಯನ್ನು ದಹಿಸಿದರು.
ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದೇಶದ ಎಲ್ಲಾ ಪ್ರಜೆಗಳಿಗೆ ನವರಾತ್ರಿ ಹಾಗೂ ವಿಜಯದಶಮಿ ಶುಭಾಶಯ ಕೋರಿದರು. ದುಷ್ಟರ ವಿರುದ್ಧ ಶಿಷ್ಟರ ವಿಜಯದ ಸಂಕೇತವಾಗಿ ಈ ಹಬ್ಬ ಆಚರಿಸಲಾಗುತ್ತಿದೆ ಎಂದರು.
ದೀರ್ಘಕಾಲದ ಕಾಯುವಿಕೆಯ ನಂತರ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವುದನ್ನು ನೋಡುವ ಭಾಗ್ಯ ನಮ್ಮದಾಗಿದೆ. ಇದು ನಮ್ಮ ತಾಳ್ಮೆಯ ವಿಜಯದ ಸಂಕೇತವಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


