ದೇಶ

ತಮಿಳುನಾಡಿನಲ್ಲಿ ಭೀಕರ ಅಪಘಾತ: ಬಸ್‌- ಟಾಟಾ ಸುಮೋ ಢಿಕ್ಕಿ, 7 ಸಾವು, 14 ಜನರಿಗೆ ಗಾಯ

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿ, 14 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ತಮಿಳುನಾಡಿನಲ್ಲಿ ಭೀಕರ ಅಪಘಾತ: ಬಸ್‌- ಟಾಟಾ ಸುಮೋ ಢಿಕ್ಕಿ, 7 ಸಾವು, 14 ಜನರಿಗೆ ಗಾಯ
ತಿರುವಣ್ಣಾಮಲೈ ಅಪಘಾತ
Published On :

ಚೆನ್ನೈ: ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರ ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿ, 14 ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಈ ಘಟನೆ ನಡೆದಿದ್ದು, ಸರ್ಕಾರಿ ಬಸ್ ಮತ್ತು ಟಾಟಾ ಸುಮೋ ಮುಖಾಮುಖಿ ಡಿಕ್ಕಿಯಾಗಿದೆ. ಮೂಲಗಳ ಪ್ರಕಾರ ಬಸ್ ಬೆಂಗಳೂರಿನಿಂದ ತಿರುವಣ್ಣಾಮಲೈಗೆ ತೆರಳುತ್ತಿತ್ತು. ಕರುಮಂಕುಲಂ ಪ್ರದೇಶದಲ್ಲಿ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರವಾಗಿ ಗಾಯಗೊಂಡ 14 ಮಂದಿಯನ್ನು ಪೊಲೀಸರು ರಕ್ಷಿಸಿ ತಿರುವಣ್ಣಾಮಲೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಿರುವಣ್ಣಾಮಲೈ ಜಿಲ್ಲಾ ಪೊಲೀಸರು ಟಾಟಾ ಸುಮೋದಲ್ಲಿ ಬಂದ ಪ್ರಯಾಣಿಕರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದು, ಮೃತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಪ್ರಕ್ರಿಯೆ ನಡೆಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.