ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಕೆನಡಾದಲ್ಲಿ ವೀಸಾ ಸೇವೆ ಪುನರಾಂಭಿಸಿದ ಭಾರತ!
ಎರಡು ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಪುನರಾರಂಭಿಸಿದೆ. ಪ್ರವೇಶ ಸೇರಿದಂತೆ ವ್ಯಾಪಾರ, ವೈದ್ಯಕೀಯ ವೀಸಾ ಮತ್ತು ಕಾನ್ಫರೆನ್ಸ್ ವೀಸಾ ಸೇವೆಯನ್ನು ಪುನರಾರಂಭಿಸಲಿದೆ ಎಂದು ಕೆನಡಾದಲ್ಲಿರುವ ಭಾರತದ ಹೈಕಮಿಷನ್ ಬುಧವಾರ ತಿಳಿಸಿದೆ.

ನವದೆಹಲಿ: ಎರಡು ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟಿನ ಮಧ್ಯೆ ಭಾರತವು ಕೆನಡಾದಲ್ಲಿ ವೀಸಾ ಸೇವೆಗಳನ್ನು ಪುನರಾರಂಭಿಸಿದೆ. ಪ್ರವೇಶ ಸೇರಿದಂತೆ ವ್ಯಾಪಾರ, ವೈದ್ಯಕೀಯ ವೀಸಾ ಮತ್ತು ಕಾನ್ಫರೆನ್ಸ್ ವೀಸಾ ಸೇವೆಯನ್ನು ಪುನರಾರಂಭಿಸಲಿದೆ ಎಂದು ಕೆನಡಾದಲ್ಲಿರುವ ಭಾರತದ ಹೈಕಮಿಷನ್ ಬುಧವಾರ ತಿಳಿಸಿದೆ.
ಜೂನ್‌ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ಭಾರತೀಯ ಏಜೆಂಟ್‌ಗಳು ಮತ್ತು ಖಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ನಡುವೆ ಸಂಭಾವ್ಯ ಸಂಪರ್ಕವಿದೆ ಎಂದು ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ 18 ರಂದು ಆರೋಪಿಸಿದ ನಂತರ ಭಾರತ ಮತ್ತು ಕೆನಡಾ ನಡುವಿನ ಸಂಬಂಧಗಳು ಹದಗೆಟ್ಟಿದ್ದವು.
ಭಾರತ ಆರೋಪಗಳನ್ನು ಬಲವಾಗಿ ತಳ್ಳಿ ಹಾಕಿದ ಕೆಲವು ದಿನಗಳ ನಂತರ ಕೆನಡಾದ ನಾಗರಿಕರಿಗೆ ವೀಸಾಗಳನ್ನು ನೀಡುವುದನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸುವುದಾಗಿ ಘೋಷಿಸಿತ್ತು. ಭಾರತದಲ್ಲಿ ತನ್ನ ರಾಜತಾಂತ್ರಿಕರ ಸಂಖ್ಯೆಯನ್ನು ಕಡಿಮೆ ಮಾಡಲು ಒಟ್ಟಾವಾವನ್ನು ಕೇಳಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


