ಜಮ್ಮು ಮತ್ತು ಕಾಶ್ಮೀರ: ಒಳನುಸುಳುವಿಕೆ ಯತ್ನ ವಿಫಲ, 5 ಉಗ್ರರ ಸೆದೆಬಡಿದ ಭಾರತೀಯ ಸೇನೆ
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿ, 5 ಉಗ್ರರ ಹೆಡೆಮುರಿ ಕಟ್ಟಿದೆ.

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿ, 5 ಉಗ್ರರ ಹೆಡೆಮುರಿ ಕಟ್ಟಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ. ಮಾತ್ರವಲ್ಲದೇ ಈ ಕಾರ್ಯಾಚರಣೆಯಲ್ಲಿ ಗಡಿಯೊಳಗೆ ನುಸುಳಲು ಯತ್ನಿಸಿದ ಐದು ಮಂದಿ ಅಪರಿಚಿತ ಭಯೋತ್ಪಾದಕರನ್ನು ಹತ ಮಾಡಿದೆ.
ಈ ಬಗ್ಗೆ ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಮಾತನಾಡಿ, ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇದುವರೆಗೆ ಐವರು ಉಗ್ಗರು ಸಾವನ್ನಪ್ಪಿದ್ದಾರೆ. ಈ ಪೈಕಿ ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದೆ ಮೂರು ಮಂದಿ ಸೇರಿ ಒಟ್ಟು 5 ಮಂದಿ ಉಗ್ರರನ್ನು ಹತ ಮಾಡಲಾಗಿದೆ ಎಂದರು.
ಅಂತೆಯೇ ಉಗ್ರರ ಗುರುತು ಪತ್ತೆ ಕಾರ್ಯ ಮಾಡಲಾಗುತ್ತಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ನೀಡಲಾಗುವುದು ಎಂದು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


