ದೇಶ

ಜಮ್ಮು-ಕಾಶ್ಮೀರ: ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ, ಇಬ್ಬರು ಯೋಧರು ಸೇರಿ ಐವರಿಗೆ ಗಾಯ

ಜಮ್ಮುವಿನ ಅರ್ನಿಯಾ ಮತ್ತು ಆರ್​ಎಸ್ ಪುರ ಸೆಕ್ಟರ್​ಗಳ ಅಂತಾರಾಷ್ಟ್ರೀಯ ಗಡಿ (ಐಬಿ) ಯಲ್ಲಿರುವ ಐದು ಬಿಎಸ್​ಎಫ್​ ಪೋಸ್ಟ್​ಗಳ ಮೇಲೆ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಗಡಿ ಭದ್ರತಾ ಪಡೆಯ ಇಬ್ಬರು ಯೋಧರು, ಮೂವರು ನಾಗರೀಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ, ಇಬ್ಬರು ಯೋಧರು ಸೇರಿ ಐವರಿಗೆ ಗಾಯ
ಸಂಗ್ರಹ ಚಿತ್ರ
Published On :

ಶ್ರೀನಗರ: ಜಮ್ಮುವಿನ ಅರ್ನಿಯಾ ಮತ್ತು ಆರ್​ಎಸ್ ಪುರ ಸೆಕ್ಟರ್​ಗಳ ಅಂತಾರಾಷ್ಟ್ರೀಯ ಗಡಿ (ಐಬಿ) ಯಲ್ಲಿರುವ ಐದು ಬಿಎಸ್​ಎಫ್​ ಪೋಸ್ಟ್​ಗಳ ಮೇಲೆ ಪಾಕಿಸ್ತಾನ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು, ದಾಳಿಯಲ್ಲಿ ಗಡಿ ಭದ್ರತಾ ಪಡೆಯ ಇಬ್ಬರು ಯೋಧರು, ಮೂವರು ನಾಗರೀಕರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಅರ್ನಿಯಾ ಸೆಕ್ಟರ್​ನಲ್ಲಿ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಪಾಕಿಸ್ತಾನ ರೇಂಜರ್​​​ಗಳಿಂದ ಗುಂಡಿನ ದಾಳಿ ಆರಂಭವಾಗಿತ್ತು. ಈ ಅಪ್ರಚೋದಿತ ಗುಂಡಿನ ದಾಳಿಗೆ ಬಿಎಸ್​ಎಫ್​ ಪಡೆ ದಿಟ್ಟ ಉತ್ತರ ನೀಡುತ್ತಿದೆ. ಪ್ರಸ್ತುತ ಗುಂಡಿನ ಚಕಮಕಿ ಮುಂದುವರಿದಿದೆ ಎಂದು ವರದಿಗಳು ತಿಳಿಸಿವೆ.

ಗಾಯಗೊಂಡ ಯೋಧರನ್ನು ಚಿಕಿತ್ಸೆಗಾಗಿ ಜಮ್ಮುವಿನ ಜಿಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಿಎಸ್ಎಫ್​ ಪ್ರತಿ ದಾಳಿಯಿಂದ ಪಾಕಿಸ್ತಾನದ ಎಷ್ಟು ಪೋಸ್ಟ್​ಗಳಿಗೆ ಹಾನಿಯಾಗಿದೆ ಎಂಬ ವಿಚಾರ ಇಂದು ತಿಳಿದುಬರಲಿದೆ ಎಂದು ಬಿಎಸ್​ಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನದ ರೇಂಜರ್‌ಗಳು ಜನವಸತಿ ಪ್ರದೇಶಗಳಲ್ಲಿ ಮಾರ್ಟರ್ ಶೆಲ್‌ಗಳನ್ನು ಹಾರಿಸಿದ್ದಾರೆ. ಇದರಿಂದ ಗಡಿ ಪ್ರದೇಶದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.

ಅರ್ನಿಯಾ, ಸುಚ್ಟ್‌ಗಢ್, ಸಿಯಾ, ಜಬೋವಾಲ್ ಮತ್ತು ಟ್ರೆವಾ ಪೋಸ್ಟ್​ಗಳು ದಾಳಿಗೊಳಗಾಗಿವೆ ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನದ ದಾಳಿಯಿಂದ ಅರ್ನಿಯಾ ಮತ್ತು ಜಬೋವಾಲ್‌ನಲ್ಲಿನ ಜನರು, ವಿಶೇಷವಾಗಿ ವಲಸೆ ಕಾರ್ಮಿಕರು ತಮ್ಮ ಮನೆಗಳನ್ನು ತೊರೆಯುತ್ತಿದ್ದು, ಗಡಿ ಭಾಗದ ವಿವಿಧ ಗ್ರಾಮಗಳಲ್ಲಿ ಹಲವಾರು ಕುಟುಂಬಗಳು ಬಂಕರ್‌ಗಳಲ್ಲಿ ಆಶ್ರಯ ಪಡೆದಿವೆ ಎಂದು ವರದಿಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.