ರಾಜಸ್ಥಾನ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೂರನೇ ಪಟ್ಟಿ ಬಿಡುಗಡೆ
ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 19 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.

ಜೈಪುರ: ನವೆಂಬರ್ 25 ರಂದು ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 19 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಇದುವರೆಗೆ ಒಟ್ಟು 95 ಅಭ್ಯರ್ಥಿಗಳನ್ನು ಘೋಷಿಸಿದ್ದು, ಈ ಪಟ್ಟಿಯಲ್ಲಿ ಸಂಪುಟ ಸಚಿವರು ಸೇರಿದಂತೆ 13 ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ.
ಧೋಲ್‌ಪುರದಿಂದ ಶೋಭಾ ರಾಣಿ ಕುಶ್ವಾ, ಸಿಕರ್‌ನಿಂದ ರಾಜೇಂದ್ರ ಪ್ರತೀಕ್, ನಗರ್ ನಿಂದ ವಾಜಿಬ್ ಅಲಿ, ಡಿಯೋಲಿ-ಉನಿಯಾರಾದಿಂದ ಹರೀಶ್ ಚಂದ್ರ ಮೀನಾ, ಜಲೋದ್(ಎಸ್‌ಟಿ)ನಿಂದ ಹೀರಾ ಲಾಲ್ ದಾರಂಗಿ ಮತ್ತು ಕರೌಲಿಯಿಂದ ಲಖನ್ ಸಿಂಗ್ ಮೀನಾ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ಪಿ ಚಿಹ್ನೆಯ ಮೇಲೆ ಆಯ್ಕೆಯಾಗಿದ್ದ ವಾಜಿಬ್ ಅಲಿ ಮತ್ತು ಲಖನ್ ಸಿಂಗ್ ಮೀನಾ ಅವರು ಈ ಬಾರಿ ಕಾಂಗ್ರೆಸ್ ಸೇರಿದ್ದು, ಆಡಳಿತ ಪಕ್ಷದಿಂದ ಕಣಕ್ಕಿಳಿದಿದ್ದಾರೆ.
ಸಪೋತ್ರದಿಂದ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಸಚಿವ ರಮೇಶ್ ಚಂದ್ ಮೀನಾ ಮತ್ತು ಗಂಗಾಪುರದಿಂದ ಪಕ್ಷೇತರ ಶಾಸಕ ರಾಮಕೇಶ್ ಮೀನಾ ಅವರನ್ನು ಕಣಕ್ಕಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


