Telangana polls: 45 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್; ಮಾಜಿ ಕ್ರಿಕೆಟಿಗ ಅಜರುದ್ದೀನ್ ಕಣಕ್ಕೆ!
ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 45 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.

ಹೈದರಾಬಾದ್: ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 45 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.
ಜುಬಿಲಿ ಹಿಲ್ಸ್‌ನಿಂದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮತ್ತು ಲಾಲ್ ಬಹದ್ದೂರ್ ನಗರದಿಂದ ಲೋಕಸಭೆಯ ಮಾಜಿ ಸಂಸದ ಮಧು ಗೌರ್ ಯಾಸ್ಕಿ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಪಕ್ಷದ ಪಟ್ಟಿಯ ಪ್ರಕಾರ, ಹುಸ್ನಾಬಾದ್‌ನಿಂದ ಪೊನ್ನಂ ಪ್ರಭಾಕರ್, ಆದಿಲಾಬಾದ್‌ನಿಂದ ಕಾಂಡಿ ಶ್ರೀನಿವಾಸ್ ರೆಡ್ಡಿ, ಖಮ್ಮಂನಿಂದ ತುಮಲ ನಾಗೇಶ್ವರ ರಾವ್, ಮುನುಗೋಡಿನಿಂದ ಕೆ ರಾಜ್ ಗೋಪಾಲ್ ರೆಡ್ಡಿ ಅವರನ್ನು ಕಣಕ್ಕಿಳಿಸಲಾಗಿದೆ.
ಇದರೊಂದಿಗೆ ನವೆಂಬರ್ 30ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಪಕ್ಷವು ಇದುವರೆಗೆ ಒಟ್ಟು 100 ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ 119 ವಿಧಾನಸಭಾ ಕ್ಷೇತ್ರಗಳಿವೆ.
ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಕಚೇರಿಯಲ್ಲಿ ತೆಲಂಗಾಣ ಕುರಿತ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಿಇಸಿ ಸಭೆಯಲ್ಲಿ ಸೋನಿಯಾ ಗಾಂಧಿ, ಸಲ್ಮಾನ್ ಖುರ್ಷಿದ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು. ಅಕ್ಟೋಬರ್ 15ರಂದು ಕಾಂಗ್ರೆಸ್ 55 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು.
ತೆಲಂಗಾಣ ಚುನಾವಣೆಗೆ ನವೆಂಬರ್ 3 ರಂದು ಅಧಿಸೂಚನೆ ಹೊರಡಿಸಲಿದ್ದು, ನವೆಂಬರ್ 30ರಂದು ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.
ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ ನಡೆಸುತ್ತಿದೆ. ರಾಜ್ಯ ರಚನೆಯಾದಾಗಿನಿಂದ ಕೆ.ಚಂದ್ರಶೇಖರ ರಾವ್ ಅವರ ಬಿಆರ್‌ಎಸ್ ಆಡಳಿತದಲ್ಲಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ, ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯು 119 ಸ್ಥಾನ ಗೆದ್ದಿದ್ದರೆ ಕಾಂಗ್ರೆಸ್ 19 ಕ್ಷೇತ್ರಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


