ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ 7 ಮಂದಿ ದುರ್ಮರಣ
ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ದುರ್ಮರವನ್ನಪ್ಪಿರುವ ಘಟನೆ ರಾಜಸ್ಥಾನದ ಹನುಮಾನ್ಗಡ್ ಜಿಲ್ಲೆಯಲ್ಲಿ ಶನಿವಾರ ಸಂಜೆ ನಡೆದಿದೆ.

ಜೈಪುರ: ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ದುರ್ಮರವನ್ನಪ್ಪಿರುವ ಘಟನೆ ರಾಜಸ್ಥಾನದ ಹನುಮಾನ್ಗಡ್ ಜಿಲ್ಲೆಯಲ್ಲಿ ಶನಿವಾರ ಸಂಜೆ ನಡೆದಿದೆ.
ಮೃತರನ್ನು ಪರಮ್‌ಜೀತ್ ಕೌರ್ (60), ಖುಶ್ವಿಂದರ್ ಸಿಂಗ್ (25), ಅವರ ಪತ್ನಿ ಪರಮ್‌ಜೀತ್ ಕೌರ್ (22), ಮಗ ಮಂಜೋತ್ ಸಿಂಗ್ (5), ರಾಂಪಾಲ್ (36), ಅವರ ಪತ್ನಿ ರೀನಾ (35) ಮತ್ತು ಮಗಳು ರೀತ್ (12) ಎಂದು ಗುರುತಿಸಲಾಗಿದೆ.
ಗಾಯಗೊಂಡವರನ್ನು ಆಕಾಶದೀಪ್ ಸಿಂಗ್ (14) ಮತ್ತು ಮನರಾಜ್ ಕೌರ್ (2) ಎಂದು ಗುರುತಿಸಲಾಗಿದ್ದು, ಅವರನ್ನು ಬಿಕಾನೇರ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ದುರಂತದ ಬಳಿಕ ಟ್ರಕ್ ವಾಹನವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಹನುಮಾನ್ಗಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಎಸ್ಪಿ ರಾಜೀವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಕಾರಿನಲ್ಲಿ 9 ಜನ ಪ್ರಯಾಣಿಸುತ್ತಿದ್ದು, ಈ ಪೈಕಿ ಏಳು ಜನ ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆಯಾಗಿದ್ದು, ಎಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


