ಆಂಧ್ರ ಪ್ರದೇಶ ರೈಲು ದುರಂತ: ಹಳಿಗಳಿಗೆ ಹಾನಿ, 33 ರೈಲುಗಳು ರದ್ದು!
ಆಂಧ್ರಪ್ರದೇಶ ರೈಲು ದುರಂತ ಘಟನೆ ಬಳಿಕ ಹಳಿಗಳು ಹಾನಿಗೊಳಗಾಗಿದ್ದು, ಪರಿಣಾಮ 33 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.

ಅಮರಾವತಿ: ಆಂಧ್ರಪ್ರದೇಶ ರೈಲು ದುರಂತ ಘಟನೆ ಬಳಿಕ ಹಳಿಗಳು ಹಾನಿಗೊಳಗಾಗಿದ್ದು, ಪರಿಣಾಮ 33 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.
ಆಂಧ್ರ ಪ್ರದೇಶದ ವಿಜಯನಗರದಲ್ಲಿ (Vijayanagara) ಎರಡು ಪ್ಯಾಸೆಂಜರ್ ರೈಲುಗಳ ಮಧ್ಯೆ ಸಂಭವಿಸಿದ ಅಪಘಾತದ ನಂತರ 30 ರೈಲುಗಳನ್ನು ರದ್ದುಗೊಳಿಸಲಾಗಿದ್ದು, 11 ಇತರ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ, 24 ರೈಲುಗಳ ಮಾರ್ಗವನ್ನು ಬದಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪೈಕಿ 3 ರೈಲುಗಳನ್ನು ರದ್ದುಗೊಳಿಸಲಾಗಿದ್ದು, ಎರಡು ರೈಲುಗಳ ವೇಳಾಪಟ್ಟಿಯನ್ನು ಇಂದು ಬೆಳಿಗ್ಗೆ ಬದಲಾಯಿಸಲಾಗಿದೆ ಎಂದು ಹೇಳಿದ್ದಾರೆ.
ಚೆನ್ನೈ ಸೆಂಟ್ರಲ್-ಪುರಿ (22860), ರಾಯಗಡ- ಗುಂಟೂರು (17244), ವಿಶಾಖಪಟ್ಟಣ-ಗುಂಟೂರು (17240)ರೈಲು ರದ್ದಾಗಿದ್ದು, ಚೆನ್ನೈ ಸೆಂಟ್ರಲ್-ಶಾಲಿಮಾರ್ (12842), ಅಲೆಪ್ಪಿ-ಧನ್‌ಬಾದ್‌ಗೆ (13352)ರೈಲುಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ನಲ್ಲಿ ಎರಡು ರೈಲುಗಳ ನಡುವೆ ಭಾನುವಾರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ. ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲು ಮತ್ತು ವಿಶಾಖಪಟ್ಟಣಂ-ರಗಡ ಪ್ಯಾಸೆಂಜರ್ ರೈಲು ನಡುವೆ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ 3 ಬೋಗಿಗಳು ಜಖಂಗೊಂಡಿವೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿವೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


