ಆದಿತ್ಯಾ ಎಲ್ 1 ಯಶಸ್ವಿ ಉಡಾವಣೆ: ಇಸ್ರೋ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮೋದಿ ಹರ್ಷ, ಶುಭ ಕೋರಿದ ಅಮಿತ್ ಶಾ
ಚಂದ್ರಯಾನ-3 (Chandrayaan-3) ಯಶಸ್ಸಿನ ಬೆನ್ನಲ್ಲೇ ಇಂದು ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಆದಿತ್ಯಾ ಎಲ್ 1 ನೌಕೆಯನ್ನೂ ಕೂಡ ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.

ಬೆಂಗಳೂರು: ಚಂದ್ರಯಾನ-3 (Chandrayaan-3) ಯಶಸ್ಸಿನ ಬೆನ್ನಲ್ಲೇ ಇಂದು ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಆದಿತ್ಯಾ ಎಲ್ 1 ನೌಕೆಯನ್ನೂ ಕೂಡ ಯಶಸ್ವಿಯಾಗಿ ಉಡಾವಣೆ ಮಾಡಿದ್ದು, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
ಇಸ್ರೋ ಸಂಸ್ಥೆ ಸೂರ್ಯನನ್ನು ಅಧ್ಯಯನ ಮಾಡಲು ಆದಿತ್ಯ ಎಲ್-1 ಮಿಷನ್ ಅನ್ನು ಶನಿವಾರ ಬೆಳಗ್ಗೆ 11.50ಕ್ಕೆ ಶ್ರೀ ಹರಿಕೋಟಾದ ಸತೀಶ್ ಉಡಾವಣೆ ಕೇಂದ್ರದಿಂದ ಉಡಾವಣೆ ಮಾಡಿತು. ಇಸ್ರೋ ವಿಜ್ಞಾನಿಗಳ ಈ ಅಭೂತಪೂರ್ವ ಸಾಧನೆಗಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಟ್ವೀಟ್ (Tweet) ಮೂಲಕ ಅಭಿನಂದನೆ ತಿಳಿಸಿದ್ದಾರೆ.
'ಚಂದ್ರಯಾನ-3 ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರಿಸಿದೆ. ಭಾರತದ ಮೊದಲ ಸೌರ ಮಿಷನ್, ಆದಿತ್ಯ ಎಲ್-1ನ ಯಶಸ್ವಿ ಉಡಾವಣೆಗಾಗಿ ಇಸ್ರೋ ವಿಜ್ಞಾನಿಗಳು ಮತ್ತು ಎಂಜಿನಿಯರ್‌ಗಳಿಗೆ ಅಭಿನಂದನೆಗಳು. ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಉತ್ತಮ ತಿಳುವಳಿಕೆಯನ್ನು ಅಭಿವೃದ್ಧಿಪಡಿಸಲು ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ ಎಂದು ಬರೆದುಕೊಂಡಿದ್ದಾರೆ.
ಅಮಿತ್ ಶಾ ಅಭಿನಂದನೆ
ಆದಿತ್ಯ ಎಲ್-1 ಯಶಸ್ವಿ ಉಡಾವಣೆಗಾಗಿ ಇಸ್ರೋ ವಿಜ್ಞಾನಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಭಿನಂದನೆ ಸಲ್ಲಿಸಿದ್ದು, "ಭಾರತದ ಮೊದಲ ಸೌರ ಮಿಷನ್ ಆದಿತ್ಯ L1 ಯಶಸ್ವಿ ಉಡಾವಣೆಗಾಗಿ ರಾಷ್ಟ್ರವು ಹೆಮ್ಮೆಪಡುತ್ತದೆ ಮತ್ತು ಸಂತೋಷವಾಗಿದೆ. ಇದು ಅಮೃತ ಕಾಲದ ಸಮಯದಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಆತ್ಮನಿರ್ಭರ ಭಾರತ್‌ನ ಪ್ರಧಾನಿ ಮೋದಿಯವರ ದೂರದೃಷ್ಟಿಯನ್ನು ಈಡೇರಿಸುವತ್ತ ಒಂದು ದೈತ್ಯ ಹೆಜ್ಜೆಯಾಗಿದೆ." ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


