ಜಿ 20 ಶೃಂಗಸಭೆ: ಶುಕ್ರವಾರ ಜೋ ಬೈಡನ್ ಜೊತೆಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ
ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಪಾಲ್ಗೊಳ್ಳದಿರುವುದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿರಾಸೆ ವ್ಯಕ್ತಪಡಿಸಿದ್ದು, ಈ ವಾರ ಭಾರತ ಪ್ರವಾಸಕ್ಕಾಗಿ ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಪಾಲ್ಗೊಳ್ಳದಿರುವುದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿರಾಸೆ ವ್ಯಕ್ತಪಡಿಸಿದ್ದು, ಈ ವಾರ ಭಾರತ ಪ್ರವಾಸಕ್ಕಾಗಿ ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ.
ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜೋ- ಬೈಡನ್ ಮುಂದಿನ ವಾರ ಭಾರತಕ್ಕೆ ಆಗಮಿಸಲಿದ್ದಾರೆ. ಅಲ್ಲದೇ, ಶೃಂಗಸಭೆಯ ಭಾಗವಾಗಿ ಸೆಪ್ಟೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂದು ಶ್ವೇತಭವನ ಪ್ರಕಟಣೆ ತಿಳಿಸಿದೆ.
ಭಾರತ ಮತ್ತು ವಿಯೆಟ್ನಾಂ ಭೇಟಿಗಳನ್ನು ಎದುರು ನೋಡುತ್ತಿರುವುದಾಗಿ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ. ಸೆಪ್ಟೆಂಬರ್ 9 ಮತ್ತು 10 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಶೃಂಗಸಭೆಯಲ್ಲಿ ಜಿ 20 ನಾಯಕತ್ವಕ್ಕಾಗಿ ಪಿಎಂ ಮೋದಿಯನ್ನು ಬೈಡನ್ ಶ್ಲಾಘಿಸುತ್ತಾರೆ ಎಂದು ಶ್ವೇತಭವನವು ಈ ವಾರದ ಆರಂಭದಲ್ಲಿ ತಿಳಿಸಿತ್ತು.
ಚೀನಾದೊಂದಿಗಿನ ಸಂಬಂಧವನ್ನು ಸರಿಪಡಿಸಲು ಅಮೆರಿಕ ಪ್ರಯತ್ನಿಸುತ್ತಿರುವಾಗ, ಸೆಪ್ಟೆಂಬರ್ 9 ಮತ್ತು 10 ರಂದು ಭಾರತದಲ್ಲಿ ನಡೆಯಲಿರುವ ಎರಡು ದಿನಗಳ ಜಿ-20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾಗವಹಿಸದಿರುವ ಬಗ್ಗೆ ಜೋ- ಬೈಡನ್ ನಿರಾಶೆ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


