ಮುಂಬೈ: ಕುತ್ತಿಗೆ ಸೀಳಿದ ಗಗನಸಖಿಯ ಶವ ಪತ್ತೆ!
ವಾಣಿಜ್ಯ ನಗರಿ ಮುಂಬೈನ ಅಪಾರ್ಟ್‌ಮೆಂಟ್ ಒಂದರಲ್ಲಿ ಕುತ್ತಿಗೆ ಸೀಳಿದ 24 ವರ್ಷದ ಗಗನಸಖಿಯೊಬ್ಬರ ಶವ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಮುಂಬೈ: ವಾಣಿಜ್ಯ ನಗರಿ ಮುಂಬೈನ ಅಪಾರ್ಟ್‌ಮೆಂಟ್ ಒಂದರಲ್ಲಿ ಕುತ್ತಿಗೆ ಸೀಳಿದ 24 ವರ್ಷದ ಗಗನಸಖಿಯೊಬ್ಬರ ಶವ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಮೃತರನ್ನು ರೂಪಲ್ ಓಗ್ರೆ ಎಂದು ಗುರುತಿಸಲಾಗಿದೆ. ಛತ್ತೀಸ್‌ಗಢ ಮೂಲದವರಾದ ಈಕೆ, ಏರ್ ಇಂಡಿಯಾದಲ್ಲಿ ತರಬೇತಿಗಾಗಿ ಏಪ್ರಿಲ್‌ನಲ್ಲಿ ಮುಂಬೈಗೆ ಬಂದಿದ್ದರು. ಉಪನಗರ ಅಂಧೇರಿಯ ಮರೋಲ್ ಪ್ರದೇಶದ ಕ್ರಿಶನ್‌ಲಾಲ್ ಮರ್ವಾಹ್ ಮಾರ್ಗದಲ್ಲಿರುವ ಎನ್‌ಜಿ ಕಾಂಪ್ಲೆಕ್ಸ್‌ನಲ್ಲಿರುವ ಫ್ಲಾಟ್‌ನಲ್ಲಿ ಭಾನುವಾರ ತಡರಾತ್ರಿ ಆಕೆ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕುಟುಂಬ ಸದಸ್ಯರ ಫೋನ್ ಕರೆಯನ್ನು ಆಕೆ ಸ್ವೀಕರಿಸದಿದ್ದಾಗ ಮುಂಬೈನಲ್ಲಿರುವ ಆಕೆಯ ಸ್ನೇಹಿತರಿಗೆ ಫೋನ್ ಮಾಡಿದ್ದು, ಅವರು ಫ್ಲಾಟ್ ಗೆ ಬಂದು ನೋಡಿದಾಗ ಒಳಗಿನಿಂದ ಬೀಗ ಹಾಕಿರುವುದನ್ನು ಕಂಡುಬಂದಿದೆ. ನಂತರ, ಅವರು ಪೊವೈ ಪೊಲೀಸರನ್ನು ಸಂಪರ್ಕಿಸಿದ್ದು, ಅವರ ಸಹಾಯದಿಂದ ನಕಲಿ ಕೀ ಬಳಸಿ ಫ್ಲಾಟ್ ಬಾಗಿಲು ತೆರೆದಾಗ ಮಹಿಳೆ ಕುತ್ತಿಗೆ ಸೀಳಿ ಬಿದ್ದಿರುವುದು ಪತ್ತೆಯಾಗಿದೆ. ಕೂಡಲೇ ಆಕೆಯನ್ನು ರಾಜವಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಲ್ಲಿ ದಾಖಲಿಸುವ ಮುನ್ನವೇ ಆಕೆ ಮೃತಪಟ್ಟಿದ್ದಳು ಎಂದು ಅವರು ತಿಳಿಸಿದ್ದಾರೆ.
ಈ ಸಂಬಂಧ ಪೋವಾಯಿ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ತನಿಖೆಯ ಸಮಯದಲ್ಲಿ ಮಹಿಳೆ ತನ್ನ ಸಹೋದರಿ, ತದನಂತರ ಗೆಳೆಯನೊಂದಿಗೆ ಫ್ಲಾಟ್‌ನಲ್ಲಿ ವಾಸಿಸುತ್ತಿದದ್ದು ತಿಳಿದುಬಂದಿದೆ. ಆದರೆ ಇಬ್ಬರೂ ಎಂಟು ದಿನಗಳ ಹಿಂದೆ ತಮ್ಮ ಸ್ವಂತ ಸ್ಥಳಕ್ಕೆ ತೆರಳಿದ್ದರು. ಆದರೆ, ಇದೀಗ ಈ ಘಟನೆ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


