ರಾಜ್‌ಘಾಟ್‌ನಲ್ಲಿ 12 ಅಡಿ ಎತ್ತರದ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ರಾಷ್ಟ್ರಪತಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಯವರ 12 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಯವರ 12 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.
ವಿವಿಧ ಭಂಗಿಗಳಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಗಳನ್ನು ಸ್ಥಾಪಿಸಿರುವ ಗಾಂಧಿ ವಾಟಿಕಾವನ್ನು ಸಹ ರಾಷ್ಟ್ರಪತಿಗಳು ಇಂದು ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ರಾಷ್ಟ್ರಪತಿ ಮುರ್ಮು ಅವರು, ಮಹಾತ್ಮಾ ಗಾಂಧಿಯವರು ವಿಶ್ವ ಸಮುದಾಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಮೌಲ್ಯಗಳು ಮತ್ತು ಆದರ್ಶಗಳು ಜಗತ್ತಿಗೆ ಹೊಸ ದಿಕ್ಕನ್ನು ತೋರಿಸಿವೆ ಎಂದು ಹೇಳಿದರು.
"ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರಿಂದ ಹಿಡಿದು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರವರೆಗೂ ಮಹಾತ್ಮಾ ಗಾಂಧಿಯವರ ಅಹಿಂಸೆಯ ಮಾರ್ಗ ಜಾಗತಿಕ ಅಭಿವೃದ್ಧಿಯ ಮಾರ್ಗವೆಂದು ಒಪ್ಪಿಕೊಂಡಿದ್ದಾರೆ" ಎಂದು ರಾಷ್ಟ್ರಪತಿಗಳು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


