ಕಾಶ್ಮೀರ: ರಿಯಾಸಿಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರನ ಹತ್ಯೆ, ಪೊಲೀಸರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರ ರಿಯಾಸಿ ಜಿಲ್ಲೆಯ ದೂರದ ಪ್ರದೇಶದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಿಯಾಸಿ ಜಿಲ್ಲೆಯ ದೂರದ ಪ್ರದೇಶದಲ್ಲಿ ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಓರ್ವ ಪೊಲೀಸ್ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶೋಧ ಮತ್ತು ಕಾರ್ಡನ್ ಕಾರ್ಯಾಚರಣೆಯ ಸಮಯದಲ್ಲಿ ಎನ್‌ಕೌಂಟರ್ ನಡೆದಿದೆ. ತುಲಿ ಪ್ರದೇಶದ ಗಾಲಿ ಸೊಹಾಬ್ ಗ್ರಾಮದಲ್ಲಿ ಇಬ್ಬರು ಭಯೋತ್ಪಾದಕರು ಇರುವ ಬಗ್ಗೆ ಪೊಲೀಸರಿಗೆ ನಿರ್ದಿಷ್ಟ ಮಾಹಿತಿ ಬಂದ ನಂತರ ಮಧ್ಯಾಹ್ನ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ಜಮ್ಮು ವಲಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಅವರು ಹೇಳಿದ್ದಾರೆ.
ಇಲ್ಲಿಯವರೆಗೆ ಒಬ್ಬ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದ್ದು, ಇನ್ನೊಬ್ಬನನ್ನು ತಟಸ್ಥಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಎಡಿಜಿಪಿ ತಿಳಿಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಓರ್ವ ಪೊಲೀಸ್ ಸಹ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


