ಚಂದ್ರನ ಮೇಲೆ ಮತ್ತೆ ವಿಕ್ರಮ್ ಲ್ಯಾಂಡರ್ ಸಾಫ್ಟ್ ಲ್ಯಾಂಡಿಂಗ್!
ಚಂದ್ರಯಾನ-3 ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಹೇಳಿದೆ.

ನವದೆಹಲಿ:ಚಂದ್ರಯಾನ-3 ಕಾರ್ಯಾಚರಣೆಯ ವಿಕ್ರಮ್ ಲ್ಯಾಂಡರ್ ಮತ್ತೆ ಚಂದ್ರನ ಮೇಲೆ ಇಳಿದಿರುವುದಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಸೋಮವಾರ ಹೇಳಿದೆ.
ಈ ಕುರಿತು ಟ್ವೀಟ್ ಮಾಡಿರುವ ಇಸ್ರೋ, ತನ್ನ ಯೋಜನೆಯ ಉದ್ದೇಶಗಳನ್ನು ಮೀರಿ ಕಾರ್ಯನಿರ್ವಹಿಸುತ್ತಿದೆ. ಭಾನುವಾರ ನಡೆದ ಚಂದ್ರಯಾನ-3 ಲ್ಯಾಂಡರ್ ಹಾಪ್ ಟೆಸ್ಟ್ (ಮತ್ತೊಂದು ಕಡೆಗೆ ಜಿಗಿತ) ಯಶಸ್ವಿಯಾಗಿದೆ. ಸೂಚನೆಗಳ ಮೇರೆಗೆ ವಿಕ್ರಮ್ ಲ್ಯಾಂಡರ್ ತನ್ನ ಇಂಜಿನ್‌ಗಳನ್ನು ಹಾರಿಸಿತು, ನಿರೀಕ್ಷೆಯಂತೆ ಸುಮಾರು 40 ಸೆಂ.ಮೀ ಎತ್ತರಕ್ಕೆ ಹಾರಿ, 30-40 ಸೆಂ.ಮೀ ದೂರದಲ್ಲಿ ಸುರಕ್ಷಿತವಾಗಿ ಇಳಿಯಿತು ಎಂದು ಇಸ್ರೋ ಮಾಹಿತಿ ನೀಡಿದೆ.
ಭವಿಷ್ಯದಲ್ಲಿ ಯೋಜನೆಯ ಉದ್ದೇಶ ಮುಗಿದ ಬಳಿಕ ಲ್ಯಾಂಡರ್‌ಗಳನ್ನು ವಾಪಸ್ ಭೂಮಿಗೆ ತರುವ ಹಾಗೂ ಮಾನವ ಸಹಿತ ಯೋಜನೆಗಳನ್ನು ಉತ್ತೇಜಿಸುವುದು ಈ ಪ್ರಯೋಗದ ಪ್ರಮುಖ ಉದ್ದೇಶವಾಗಿದೆ. ವಿಕ್ರಮ್ ಲ್ಯಾಂಡರ್‌ನ ಎಲ್ಲ ವ್ಯವಸ್ಥೆಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಆರೋಗ್ಯಕರವಾಗಿವೆ. ನಿಯೋಜಿತ ರ‍್ಯಾಂಪ್, ChaSTE ಮತ್ತು ILSA ಗಳನ್ನು ಮಡಚಲಾಗಿತ್ತು. ಪ್ರಯೋಗದ ನಂತರ ಅವುಗಳನ್ನು ಯಶಸ್ವಿಯಾಗಿ ಮರುನಿಯೋಜಿಸಲಾಗಿದೆ ಎಂದು ಇಸ್ರೋ ಹೇಳಿದೆ.
ಆಗಸ್ಟ್ 23 ರಂದು ಚಂದ್ರಯಾನ - 3ರ ಭಾಗವಾಗಿದ್ದ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಆಗಿತ್ತು. ಅದಾದ ಬಳಿಕ ಪ್ರಜ್ಞಾನ್ ರೋವರ್ ಚಂದ್ರನ ಮೇಲೆ ಇಳಿದು ಹಲವು ಕೆಲಸಗಳನ್ನು ಯಶಸ್ವಿಯಾಗಿ ನಿರ್ವಹಿಸಿತ್ತು. ಚಂದ್ರನ ಮೇಲೆ ಆಮ್ಲಜನಕ, ಗಂಧಕ ಸೇರಿ ಹಲವು ಅಂಶಗಳು ಇರುವುದನ್ನು ಪತ್ತೆ ಮಾಡಿತ್ತು. ಅದರ ಜೊತೆ ಚಂದ್ರನ ಮೇಲಿನ ತಾಪಮಾನದ ಬಗ್ಗೆ ವೈಜ್ಞಾನಿಕ ಮಾಹಿತಿಯನ್ನು ಕೂಡ ಪ್ರಜ್ಞಾನ್ ನೀಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


