ದೇಶ

ಉದಯನಿಧಿ ಸ್ಟಾಲಿನ್ ದಕ್ಷಿಣ ಭಾರತದ ಪಪ್ಪು: ಬಿಜೆಪಿ ಮುಖಂಡ ಅಣ್ಣಾಮಲೈ ವ್ಯಂಗ್ಯ

ತಮಿಳುನಾಡು ಸಿಎಂ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಈಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ.

ಉದಯನಿಧಿ ಸ್ಟಾಲಿನ್ ದಕ್ಷಿಣ ಭಾರತದ ಪಪ್ಪು: ಬಿಜೆಪಿ ಮುಖಂಡ ಅಣ್ಣಾಮಲೈ ವ್ಯಂಗ್ಯ
ಅಣ್ಣಾಮಲೈ
Published On :

ಚೆನ್ನೈ: ತಮಿಳುನಾಡು ಸಿಎಂ ಸ್ಟಾಲಿನ್‌ ಪುತ್ರ ಉದಯನಿಧಿ ಸ್ಟಾಲಿನ್‌ ಸನಾತನ ಧರ್ಮದ ಬಗ್ಗೆ ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಈಗ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ವ್ಯಂಗ್ಯವಾಡಿದ್ದಾರೆ.

ರಾಹುಲ್ ಗಾಂಧಿ ಮೋದಿ ಸಮುದಾಯದ ಬಗ್ಗೆ ಮಾತನಾಡಿದಂತೆ ಸನಾತನ ಧರ್ಮದ ಬಗ್ಗೆ ಉದಯನಿಧಿ ಸ್ಟಾಲಿನ್ ಮಾತನಾಡಿದ್ದಾರೆ. ಈ ಹಿನ್ನೆಲೆ ರಾಹುಲ್ ಗಾಂಧಿ ಉತ್ತರ ಭಾರತದ ಪಪ್ಪು ಆದ್ರೆ, ದಕ್ಷಿಣ ಭಾರತದ ಪಪ್ಪು ಉದಯನಿಧಿ ಸ್ಟಾಲಿನ್ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಟೀಕಿಸಿದ್ದಾರೆ.

ಈ ಸಂಬಂಧ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ, ರಾಹುಲ್ ಗಾಂಧಿ ಮೋದಿ ಸಮುದಾಯದ ಬಗ್ಗೆ ಮಾತನಾಡಿದಂತೆ ಸನಾತನ ಬಗ್ಗೆ ಉದಯನಿಧಿ ಸ್ಟಾಲಿನ್ ಮಾತನಾಡಿದ್ದಾರೆ. ಈ ಹಿನ್ನೆಲೆ ಉತ್ತರ ಭಾರತದ ಪಪ್ಪು ರಾಹುಲ್ ಗಾಂಧಿ ಆದ್ರೆ, ದಕ್ಷಿಣ ಭಾರತದ ಪಪ್ಪು ಉದಯನಿಧಿ ಎಂದಿದ್ದಾರೆ.

ಅವರು ಹೀಗೆಯೇ ಮಾತನಾಡುತ್ತಾ ಹೋದರೆ ‘I.N.D.I.A’ ಮೈತ್ರಿಕೂಟದ ಮತಬ್ಯಾಂಕ್ ಕುಸಿಯುತ್ತಲೇ ಹೋಗುತ್ತದೆ. ಈಗ ‘I.N.D.I.A’ ಮೈತ್ರಿಕೂಟದ ಮತಗಳ ಪ್ರಮಾಣ ಶೇಕಡಾ ಐದಕ್ಕೆ ಇಳಿದಿದೆ. ಉದಯನಿಧಿ ಹೀಗೆಯೇ ಮುಂದುವರಿದರೆ, ‘I.N.D.I.A’  ಮೈತ್ರಿಕೂಟದ ಮತಗಳು ಶೇಕಡಾ 20 ರಷ್ಟು ಕಡಿಮೆಯಾಗುತ್ತದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.