ಬಿಜೆಪಿ ತೊರೆದ ನೇತಾಜಿ ಮೊಮ್ಮಗ ಚಂದ್ರ ಕುಮಾರ್ ಬೋಸ್
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಅವರು ಬುಧವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕೇಸರಿ ಪಕ್ಷದ ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ.

ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್ ಅವರು ಬುಧವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದು, ಕೇಸರಿ ಪಕ್ಷದ ನಾಯಕರು ನಮ್ಮ ದೂರದೃಷ್ಟಿಗಳನ್ನು ಪ್ರಚಾರ ಮಾಡುವ ಭರವಸೆ ಈಡೇರಿಸಿಲ್ಲ ಎಂದು ಆರೋಪಿಸಿದ್ದಾರೆ.
ಚಂದ್ರ ಬೋಸ್ ಅವರು 2016 ರಲ್ಲಿ ಬಿಜೆಪಿ ಸೇರಿದ್ದರು ಮತ್ತು ಎರಡು ಬಾರಿ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. 2016 ರಲ್ಲಿ ವಿಧಾನಸಭೆ ಚುನಾವಣೆಗೆ ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ಚಂದ್ರ ಬೋಸ್ ಅವರು ಸ್ಪರ್ಧಿಸಿದ್ದರು.
"ನಾನು ಬಿಜೆಪಿಗೆ ಸೇರಿದಾಗ ನೇತಾಜಿ ಸುಭಾಷ್ ಚಂದ್ರ ಬೋಸ್ ಮತ್ತು ಶರತ್ ಚಂದ್ರ ಬೋಸ್ ಅವರನ್ನು ಒಳಗೊಳ್ಳುವ ಸಿದ್ಧಾಂತವನ್ನು ಪ್ರಚಾರ ಮಾಡಲು ನನಗೆ ಅವಕಾಶ ನೀಡಲಾಗುವುದು ಎಂದು ಭರವಸೆ ನೀಡಲಾಯಿತು. ಆದರೆ ಆ ರೀತಿಯ ಏನೂ ಆಗಲಿಲ್ಲ" ಎಂದು ಚಂದ್ರ ಬೋಸ್ ಅವರು ಹೇಳಿದ್ದಾರೆ.
2016 ರಲ್ಲಿ ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡ ಬೋಸ್ ಅವರನ್ನು 2020ರಲ್ಲಿ ಪಕ್ಷ ಪುನರ್ ರಚನೆ ಸಮಯದಲ್ಲಿ ಅವರನ್ನು ಕೈಬಿಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


