ಅದಾನಿ ಗ್ರೂಪ್ ಖರೀದಿ ಬೆಲೆ ನಿಗದಿ ನಂತರ ಹಿಮಾಚಲದ ರೈತರು ಸೇಬುಗಳನ್ನು ಕಡಿಮೆ ಬೆಲೆಗೆ ಮಾರುತ್ತಿದ್ದಾರೆ: ಪ್ರಿಯಾಂಕಾ
ಅದಾನಿ ಗ್ರೂಪ್ ಸೇಬು ಖರೀದಿ ಬೆಲೆ ಬಿಡುಗಡೆ ಮಾಡಿದ ನಂತರ ವಿಪತ್ತು ಪೀಡಿತ ಹಿಮಾಚಲ ಪ್ರದೇಶದಲ್ಲಿ ಸೇಬು ಬಾಕ್ಸ್‌ಗಳನ್ನು ಮೂರನೇ ಒಂದು ಭಾಗದಷ್ಟು ಅತಿ ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ.

ನವದೆಹಲಿ: ಅದಾನಿ ಗ್ರೂಪ್ ಸೇಬು ಖರೀದಿ ಬೆಲೆ ಬಿಡುಗಡೆ ಮಾಡಿದ ನಂತರ ವಿಪತ್ತು ಪೀಡಿತ ಹಿಮಾಚಲ ಪ್ರದೇಶದಲ್ಲಿ ಸೇಬು ಬಾಕ್ಸ್‌ಗಳನ್ನು ಮೂರನೇ ಒಂದು ಭಾಗದಷ್ಟು ಅತಿ ಕಡಿಮೆ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ಆರೋಪಿಸಿದ್ದಾರೆ.
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿಯವರು ಏಕೆ ಯಾವ ಕ್ರಮವನ್ನೂ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿರುವ ಅವರು, 'ಹಿಮಾಚಲ ಪ್ರದೇಶದ ಬೆಳೆಗಾರರು ಈಗಾಗಲೇ ಸಂಕಷ್ಟಗಳ ಸರಮಾಲೆಯನ್ನೇ ಎದುರಿಸುತ್ತಿದ್ದಾರೆ. ಇಂತಹ ಕಷ್ಟದ ಸಮಯದಲ್ಲಿ, ಪ್ರಧಾನಿಯವರ ಸ್ನೇಹಿತ ಅದಾನಿ ಅವರಿಗೆ ಏಕೆ ಮತ್ತಷ್ಟು ತೊಂದರೆ ನೀಡುತ್ತಿದ್ದಾರೆ' ಎಂದಿದ್ದಾರೆ.
ವರದಿಗಳನ್ನು ಉಲ್ಲೇಖಿಸಿ, ಅದಾನಿ ಗ್ರೂಪ್ ಗುಡ್ಡಗಾಡು ರಾಜ್ಯದಲ್ಲಿ ಸೇಬು ಖರೀದಿಯ ಕನಿಷ್ಠ ಬೆಲೆಯನ್ನು ಬಿಡುಗಡೆ ಮಾಡಿದ ನಂತರ, ಸೇಬು ಹಣ್ಣುಗಳ ಬಾಕ್ಸ್‌ಗಳನ್ನು ಈ ಹಿಂದಿನ ಬೆಲೆಯ ಮೂರನೇ ಒಂದು ಭಾಗಕ್ಕೆ ಮಾರಾಟ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
'ವಿಪತ್ತಿನ ಸಂದರ್ಭದಲ್ಲಿ ಇಂತಹ ಕೆಲಸವನ್ನು ಮಾಡುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಸದ್ಯ ಹಿಮಾಚಲ ಪ್ರದೇಶದ ರೈತರು ಮತ್ತು ತೋಟಗಾರರಿಗೆ ಸಹಾಯದ ಅಗತ್ಯವಿರುವಾಗ, ಅವರು ಹಾನಿಗೆ ಗುರಿಯಾಗುತ್ತಿದ್ದಾರೆ' ಎಂದು ಅವರು ಹೇಳಿದರು.
ಇದನ್ನೂ ಓದಿ: 'ರಾಹುಲ್ ಜತೆ ಜಗಳ': ಅಣ್ಣ, ತಂಗಿ ಜೋಡಿ ಬಿಜೆಪಿಯ ಸುಳ್ಳು, ಲೂಟಿ, ಪೊಳ್ಳು ಪ್ರಚಾರಕ್ಕೆ ಬ್ರೇಕ್ ಹಾಕಲಿದೆ ಎಂದ ಪ್ರಿಯಾಂಕಾ
'ಈ ಲೂಟಿಯನ್ನು ತಡೆಯಲು ಪ್ರಧಾನಿ ನರೇಂದ್ರ ಮೋದಿಯವರು ಏಕೆ ಏನನ್ನೂ ಮಾಡುತ್ತಿಲ್ಲ?' ಎಂದು ಪ್ರಿಯಾಂಕಾ ಪ್ರಶ್ನಿಸಿದ್ದಾರೆ.
ಈ ಆರೋಪಗಳಿಗೆ ಅದಾನಿ ಸಮೂಹದಿಂದ ಯಾವುದೇ ತಕ್ಷಣದ ಪ್ರತಿಕ್ರಿಯೆ ಲಭ್ಯವಾಗಿಲ್ಲ. ಹಿಮಾಚಲ ಪ್ರದೇಶವು ಕಳೆದ ತಿಂಗಳು ಭಾರಿ ಮಳೆ ಮತ್ತು ಭೂಕುಸಿತದಿಂದ ತತ್ತರಿಸಿ ಹೋಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


