ಸಂಸತ್ ಭವನ ಉದ್ಘಾಟನೆಗೆ ರಾಷ್ಟ್ರಪತಿ ಆಹ್ವಾನಿಸದಿರುವುದೇ ಸನಾತನ ಧರ್ಮದ ತಾರತಮ್ಯ, ಕ್ಷಮೆ ಕೇಳಲ್ಲ: ಉದಯನಿಧಿ ಸ್ಟಾಲಿನ್
ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದೇ ಸತಾನತ ಧರ್ಮದ ಜಾತಿ ವ್ಯವಸ್ಥೆಯಲ್ಲಿರುವ ತಾರತಮ್ಯಕ್ಕೆ ಉದಾಹರಣೆಯಾಗಿದ್ದು, ಕ್ಷಮೆ ಕೇಳುವುದಿಲ್ಲ ಎಂದು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಹೇಳಿದ್ದಾರೆ.

ಚೆನ್ನೈ: ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದೇ ಸತಾನತ ಧರ್ಮದ ಜಾತಿ ವ್ಯವಸ್ಥೆಯಲ್ಲಿರುವ ತಾರತಮ್ಯಕ್ಕೆ ಉದಾಹರಣೆಯಾಗಿದ್ದು, ಕ್ಷಮೆ ಕೇಳುವುದಿಲ್ಲ ಎಂದು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಹೇಳಿದ್ದಾರೆ.
ಸನಾತನ ಧರ್ಮವನ್ನು ಡೆಂಗಿ ಹಾಗೂ ಮಲೇರಿಯಾಗೆ ಹೋಲಿಸಿ, ಅದರ ನಿರ್ಮೂಲನೆಗೆ ಕರೆ ನೀಡಿದ್ದ ಸ್ಟಾಲಿನ್ ಹೇಳಿಕೆ ಈಗ ದೇಶವ್ಯಾಪಿ ಚರ್ಚೆಗೆ ಕಾರಣವಾಗಿದೆ. ಉತ್ತರ ಪ್ರದೇಶದಲ್ಲಿ ಇವರ ವಿರುದ್ಧ ಹಾಗೂ ಸ್ಟಾಲಿನ್ ಹೇಳಿಕೆ ಬೆಂಬಲಿಸಿದ ಕರ್ನಾಟಕದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ವಿವಾದ ಬೆನ್ನಲ್ಲೇ ತಮ್ಮ ಹೇಳಿಕೆಯನ್ನು ಮತ್ತೆ ಸಮರ್ಥಿಸಿಕೊಂಡಿರುವ ಉದಯನಿಧಿ ಅವರು, ಯಾವುದೇ ಬೆದರಿಕೆಯನ್ನು ಎದುರಿಸಲು ನಾನು ಸಿದ್ಧ ಎಂದು ಹೇಳಿದ್ದಾರೆ.
ಸನಾತನ ಧರ್ಮದಲ್ಲಿರುವ ಜಾತಿ ವ್ಯವಸ್ಥೆಯಿಂದಾಗಿ ಮನುಷ್ಯರ ನಡುವಿನ ತಾರತಮ್ಯಕ್ಕೆ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಿಂದ ಈಗಿನ ರಾಷ್ಟ್ರಪತಿ ಅವರನ್ನು ದೂರ ಇಟ್ಟಿರುವುದೇ ಸಾಕ್ಷಿಯಾಗಿದೆ. ನನ್ನ ಹೇಳಿಕೆ ಕುರಿತು ನಾನು ಕ್ಷಮೆಯಾಚಿಸುವುದಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


