ದೇಶ

ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ: 7 ಮಂದಿ ಸಾವು, ಐವರಿಗೆ ಗಾಯ

ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆಂದು ಪೊಲೀಸರು ಬುಧವಾರ ಹೇಳಿದ್ದಾರೆ.

ಅಸ್ಸಾಂನಲ್ಲಿ ಭೀಕರ ರಸ್ತೆ ಅಪಘಾತ: 7 ಮಂದಿ ಸಾವು, ಐವರಿಗೆ ಗಾಯ
ಸಂಗ್ರಹ ಚಿತ್ರ
Published On :

ತಿನ್ಸುಕಿಯಾ: ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆಂದು ಪೊಲೀಸರು ಬುಧವಾರ ಹೇಳಿದ್ದಾರೆ.

ಕಾಕೋಪಥರ್ ಬಳಿಯ ಬೋರ್ಡಿರಾಕ್ ಟಿನಿಯಾಲಿ ಎಂಬಲ್ಲಿ ಈ ಘಟನೆ ಸಂಭವಿಸಿದೆ. ವೇಗವಾಗಿ ಬಂದ ಟ್ರಕ್ ವೊಂದು ಕಾರಿಗೆ  ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ 7 ಮಂದಿ ಸ್ಥಳದಲ್ಲಿಯೇ ದುರ್ಮರಣವನ್ನಪ್ಪಿದ್ದಾರೆ. ಘಟನೆಯಲ್ಲಿ 5 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಟ್ರಕ್ ಚಾಲಕ ಕುಡಿದ ಅಮಲಿನಲ್ಲಿದ್ದು, ಅತಿ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದುದ್ದೇ ಘಟನೆಗೆ ಕಾರಣ ಎಂದು ಪೊಲೀಸರು ಅಧಿಕಾರಿಗಳು ಹೇಳಿದ್ದಾರೆ.

ಈ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.