ರಾಜಭವನದಲ್ಲಿ ಪ್ರತಿಭಟನೆ ನಡೆಸಲು ಮಮತಾಗೆ ಸ್ವಾಗತ: ಬಂಗಾಳ ರಾಜ್ಯಪಾಲ
ಪಶ್ಚಿಮ ಬಂಗಾಳ ರಾಜಭವನದ ಎದುರು ಪ್ರತಿಭಟನೆ ನಡೆಸಲು ಮಮತಾ ಬ್ಯಾನರ್ಜಿ ಅವರಿಗೆ ಸ್ವಾಗತವಿದೆ ಎಂದು ರಾಜ್ಯಪಾಲ ಸಿವಿ ಆನಂದ್ ಬೋಸ್ ಹೇಳಿದ್ದಾರೆ.

ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜಭವನದ ಎದುರು ಪ್ರತಿಭಟನೆ ನಡೆಸಲು ಮಮತಾ ಬ್ಯಾನರ್ಜಿ ಅವರಿಗೆ ಸ್ವಾಗತವಿದೆ ಎಂದು ರಾಜ್ಯಪಾಲ ಸಿವಿ ಆನಂದ್ ಬೋಸ್ ಹೇಳಿದ್ದಾರೆ.
ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪವನ್ನು ವಿರೋಧಿಸಿ ರಾಜಭವನದ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯಪಾಲರು, ರಾಜಭವನದ ಆವರಣದಲ್ಲಿ ಎಲ್ಲಿ ಬೇಕಾದರೂ ಪ್ರತಿಭಟನೆ ನಡೆಸಬಹುದು ಆದರೆ ರಾಜಭವನದ ಎದುರು ಮಾಡುವಂತಿಲ್ಲ ಸಿಎಂ ಬ್ಯಾನರ್ಜಿ ಅವರನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
ಸಿಎಂ ನನ್ನ ಗೌರವಾನ್ವಿತ ಸಹೋದ್ಯೋಗಿಯಾಗಿದ್ದಾರೆ. ಅವರಿಗೆ ರಾಜಭವನಕ್ಕೆ ಸ್ವಾಗತವಿದೆ. ರಾಜಭವನದಲ್ಲಿ ಪ್ರತಿಭಟನೆ ನಡೆಸಲು ಗೌರವಾನ್ವಿತ ಅತಿಥಿಯಾಗಿ ಆಗಮಿಸಿ ಪ್ರತಿಭಟನೆ ನಡೆಸಬಹುದು ಎಂದು ಬೋಸ್ ಹೇಳಿದ್ದಾರೆ.
ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ 16 ವಿವಿಗಳಿಗೆ ಉಪಕುಲಪತಿಗಳನ್ನು ನೇಮಕ ಮಾಡಿದ್ದರು. ಇದನ್ನು ವಿರೋಧಿಸಿ ಮಮತಾ ಬ್ಯಾನರ್ಜಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು.
ವಿವಿಗಳಲ್ಲಿನ ಹಿಂಸಾಚಾರ, ಭ್ರಷ್ಟಾಚಾರ ನಿರ್ಮೂಲನೆಗಾಗಿ ಹೋರಾಟ- ರಾಜ್ಯಪಾಲರು
ಇನ್ನು ರಾಜ್ಯಪಾಲರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದು, ರಾಜ್ಯಾದ್ಯಂತ ಇರುವ ವಿವಿಗಳಲ್ಲಿನ ಹಿಂಸಾಚಾರ, ಭ್ರಷ್ಟಾಚಾರಗಳ ನಿರ್ಮೂಲನೆಗಾಗಿ ಹೋರಾಟ ಮಾಡುವುದಾಗಿ ರಾಜ್ಯಪಾಲರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


