ಸನಾತನ ಧರ್ಮ ಡೆಂಘೀ, ಮಲೇರಿಯಾವಲ್ಲ, ಏಡ್ಸ್-ಕುಷ್ಠ ರೋಗವಿದ್ದಂತೆ: ಡಿಎಂಕೆ ಎ.ರಾಜಾ
ಡಿಎಂಕೆ ಸಂಸದ ಎ ರಾಜಾ ಗುರುವಾರ ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕ ಹೊಂದಿರುವ ರೋಗಗಳಿಗೆ ಹೋಲಿಸಬೇಕು ಎಂದು ಹೇಳಿದ್ದಾರೆ.

ನವದೆಹಲಿ: ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳ ಕುರಿತು ನಡೆಯುತ್ತಿರುವ ವಿವಾದದ ನಡುವೆ, ಡಿಎಂಕೆ ಸಂಸದ ಎ.ರಾಜಾ ಗುರುವಾರ ಸನಾತನ ಧರ್ಮವನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕ ಹೊಂದಿರುವ ರೋಗಗಳಿಗೆ ಹೋಲಿಸಬೇಕು ಎಂದು ಹೇಳಿದ್ದಾರೆ.
ಉದಯನಿಧಿಯವರು ಸನಾತನ ಧರ್ಮದ ಬಗ್ಗೆ ಮೃದುವಾಗಿ ಮಾತನಾಡಿದ್ದಾರೆ. ಮಲೇರಿಯಾ, ಡೆಂಘೀ ಅಂತ ರೋಗಗಳು ಸಾಮಾಜಿಕ ಪಿಡುಗು ಅಲ್ಲ. ಅದನ್ನು ಜನರು ಭಯದಿಂದ ನೋಡುವುದಿಲ್ಲ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಕುಷ್ಠ ರೋಗ, ಎಚ್ಐವಿಯನ್ನು ಅಸಹ್ಯಕರವಾಗಿ ನೋಡಲಾಗುತ್ತದೆ. ಆದ್ದರಿಂದ ನಾವು ಇದನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಅವಸ್ಥೆಯಿಂದ ಕೂಡಿದ ಕಾಯಿಲೆಯಾಗಿ ನೋಡಬೇಕಾಗಿದೆ ಎಂದು ಎ.ರಾಜಾ ಹೇಳಿದ್ದಾರೆ
ಸನಾತನ ಮತ್ತು ವಿಶ್ವಕರ್ಮ ಯೋಜನೆ ಒಂದೇ. ಪ್ರಧಾನಿ ಮೋದಿಯವರು ಸನಾತನ ಧರ್ಮಕ್ಕೆ ಹೆಚ್ಚಿನ ಒತ್ತು ನೀಡುತ್ತಾರೆ. ಯಾರನ್ನಾದರೂ ಕರೆ ತನ್ನಿ, ನಾನು ಸನಾತನ ಧರ್ಮದ ಬಗ್ಗೆ ಚರ್ಚೆಗೆ ಸಿದ್ಧನಿದ್ದೇನೆ.
ಅವರು ಯಾವುದೇ ರೀತಿಯ ಆಯುಧಗಳನ್ನು ಹೊಂದಲಿ, ನಾನು ದೆಹಲಿಗೆ ಪೆರಿಯಾರ್ ಮತ್ತು ಅಂಬೇಡ್ಕರ್ ಪುಸ್ತಕಗಳೊಂದಿಗೆ ಚರ್ಚೆಗೆ ಬರುತ್ತೇನೆ ಎಂದು ಎ.ರಾಜಾ ಹೇಳಿದರು. ನಾನು ಕೇವಲ ಪಂಚಮ ಸೂತ್ರದವನು, ಅವರು ವಿಶ್ವಗುರುವಿನ ಮುಂದೆ ಬಂದು ಚರ್ಚೆ ಮಾಡುತ್ತಾರೆ ಎಂದು ಹೇಳಿದ್ದಾರೆ.
ಪ್ರಧಾನಿ ಸಭೆ ಕರೆದರೆ ಮತ್ತು ಅವರು ನನಗೆ ಅನುಮತಿ ನೀಡಿದರೆ ಎಲ್ಲಾ ಕ್ಯಾಬಿನೆಟ್ ಮಂತ್ರಿಗಳಿಗೆ ಉತ್ತರವನ್ನು ನೀಡಲು ನಾನು ಸಿದ್ಧನಿದ್ದೇನೆ. ಸನಾತನ ಧರ್ಮ ಯಾವುದು ಎಂಬುದನ್ನು ನೀವು ನಿರ್ಧರಿಸಿದ ನಂತರ ನಾನು ವಿವರಿಸುತ್ತೇನೆ ಎಂದು ಎ.ರಾಜಾ ಸುದ್ದಿಗಾರರಿಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


