ಜಿ20 ಶೃಂಗಸಭೆ: ರಾಜಸ್ಥಾನ ಸಿಎಂ ಗೆಹ್ಲೋಟ್ ಹೆಲಿಕಾಪ್ಟರ್ ಗೆ ಅನುಮತಿ ನಿರಾಕರಿಸಿದ ಕೇಂದ್ರ
ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಹೆಲಿಕಾಪ್ಟರ್ ನಲ್ಲಿ ಉದಯಪುರದಿಂದ ಸಿಕಾರ್ಗೆ ಹೋಗಲು....

ಜೈಪುರ: ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಹೆಲಿಕಾಪ್ಟರ್ ನಲ್ಲಿ ಉದಯಪುರದಿಂದ ಸಿಕಾರ್ಗೆ ಹೋಗಲು ಅನುಮತಿ ನಿರಾಕರಿಸಿದೆ.
ಗೆಹ್ಲೋಟ್ ಅವರು ಬಾಬಾ ಶ್ರೀ ಖಿನ್ವಾದಾಸ್ ಜಿ ಮಹಾರಾಜ್ ಅವರ ಪುಣ್ಯತಿಥಿ ಕಾರ್ಯಕ್ರಮದ ಅಂಗವಾಗಿ ಸಿಕಾರ್ನಲ್ಲಿರುವ ಸಾಂಗ್ಲಿಯಾ ಪೀಠಕ್ಕೆ ಭೇಟಿ ನೀಡಬೇಕಿತ್ತು. ಆದರೆ ಹೆಲಿಕಾಪ್ಟರ್ ಗೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ತಮ್ಮ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
"ಇಂದು ಬಾಬಾ ಶ್ರೀ ಖಿನ್ವಾದಾಸ್ ಜಿ ಮಹಾರಾಜ್ ಅವರ ಪುಣ್ಯತಿಥಿ ಕಾರ್ಯಕ್ರಮದ ಅಂಗವಾಗಿ ಸಿಕರ್ನ ಸಾಂಗ್ಲಿಯಾ ಪೀಠಕ್ಕೆ ಹೋಗುವ ಕಾರ್ಯಕ್ರಮವಿತ್ತು. ಆದರೆ ಜಿ-20 ಸಭೆಯ ಕಾರಣ, ಕೇಂದ್ರ ಗೃಹ ಸಚಿವಾಲಯ ಉದಯಪುರದಿಂದ ಹೆಲಿಕಾಪ್ಟರ್ನಲ್ಲಿ ಸಿಕಾರ್ಗೆ ಹೋಗಲು ಅನುಮತಿ ನೀಡಿಲ್ಲ. ಇಂದು ನಾನು ಸಾಂಗ್ಲಿಯಾ ಪೀಠಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ ಎಂದು ಗೆಹ್ಲೋಟ್ ಟ್ವೀಟ್ ಮಾಡಿದ್ದಾರೆ.
ಈ ಬಗ್ಗೆ ಸಾಂಗ್ಲಿಯಾ ಪೀಠದ ಪೀಠಾಧೀಶ್ವರ ಶ್ರೀ ಓಂ ದಾಸ್ ಮಹಾರಾಜ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಮಾಹಿತಿ ನೀಡಿದ್ದೇನೆ ಎಂದು ಸಿಎಂ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


