ರಾಷ್ಟ್ರಪತಿಗಳ ಜಿ20 ಔತಣಕೂಟಕ್ಕೆ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಗೈರು!
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾತ್ರಿ ಆಯೋಜಿಸಿರುವ ಜಿ-20 ಶೃಂಗಸಭೆಯ ಔತಣಕೂಟದಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪಾಲ್ಗೊಳ್ಳುತ್ತಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾತ್ರಿ ಆಯೋಜಿಸಿರುವ ಜಿ-20 ಶೃಂಗಸಭೆಯ ಔತಣಕೂಟದಲ್ಲಿ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಪಾಲ್ಗೊಳ್ಳುತ್ತಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಪಟ್ನಾಯಕ್ ಈ ಔತಣಕೂಟದಲ್ಲಿ ಗೈರಾಗಲು ಹಿಂದಿರುವ ಯಾವುದೇ ಕಾರಣವನ್ನು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿಲ್ಲ.
ಒಡಿಶಾದ ಆಡಳಿತಾರೂಢ ಬಿಜೆಡಿಯ ಅಧ್ಯಕ್ಷರೂ ಆಗಿರುವ ಪಟ್ನಾಯಕ್ ಅವರು ಮುಂದಿನ ವರ್ಷ ಏಕಕಾಲದಲ್ಲಿ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು, ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಜ್ಯಗಳ ಮುಖ್ಯಮಂತ್ರಿಗಳು ಅಲ್ಲದೇ, ಕೇಂದ್ರ ಸರ್ಕಾರದ ಎಲ್ಲಾ ಕ್ಯಾಬಿನೆಟ್ ಮತ್ತು ರಾಜ್ಯ ಸಚಿವರು ಮತ್ತು ಕಾರ್ಯದರ್ಶಿಗಳನ್ನು ರಾಷ್ಟ್ರಪತಿಗಳು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ. ದೆಹಲಿಯ ಪ್ರಗತಿ ಮೈದಾನದ ಭಾರತ ಮಂಟಪದಲ್ಲಿರುವ ಇಂಡಿಯಾ ಟ್ರೇಡ್ ಪ್ರಮೋಷನ್ ಆರ್ಗನೈಸೇಶನ್ ಕಾಂಪ್ಲೆಕ್ಸ್‌ನ ಮಲ್ಟಿ ಫಂಕ್ಷನ್ ಹಾಲ್‌ನಲ್ಲಿ ಔತಣಕೂಟ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


