ಸಾಮಾಜಿಕ ಜಾಲತಾಣದಲ್ಲಿ 'ಆಕ್ಷೇಪಾರ್ಹ ಫೋಸ್ಟ್' ಘರ್ಷಣೆಯಲ್ಲಿ ಒಬ್ಬರು ಸಾವು, 8 ಮಂದಿಗೆ ಗಾಯ
ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಫೋಸ್ಟ್' ವಿಚಾರವಾಗಿ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಎರಡು ಸಮುದಾಯಗಳ ಸದಸ್ಯರು ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸತಾರಾ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಫೋಸ್ಟ್' ವಿಚಾರವಾಗಿ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಎರಡು ಸಮುದಾಯಗಳ ಸದಸ್ಯರು ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ರಾತ್ರಿ ಖಟಾವೊ ತಹಸಿಲ್‌ನ ಪುಸೆವಾಲಿ ಗ್ರಾಮದಲ್ಲಿ ನಡೆದ ಈ ಘಟನೆಯು ಎರಡು ಸಮುದಾಯಗಳ ನಡುವೆ ಉದ್ವಿಗ್ನತೆಗೆ ಕಾರಣವಾಯಿತು.ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಯಿತು.
ಘಟನೆಯಲ್ಲಿ ಕೆಲವು ಮನೆಗಳಿಗೆ ಹಾನಿ ಮಾಡಲಾಗಿದೆ ಎಂದು ಜಿಲ್ಲಾ ಆಡಳಿತದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದು ಏಳರಿಂದ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಸತಾರಾದ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸಮುದಾಯದ ಕೆಲವು ಯುವಕರ ಆಕ್ಷೇಪಾರ್ಹ ಪೋಸ್ಟ್ ಎರಡು ಸಮುದಾಯಗಳ ನಡುವೆ ಉದ್ವಿಗ್ನತೆಯನ್ನುಂಟು ಮಾಡಿದ್ದು, ಕೋಮು ಘರ್ಷಣೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಅಡಚಣೆಗೆ ಕಾರಣವಾಯಿತು. ಪೊಲೀಸರು ತಕ್ಷಣ ಸ್ಪಂದಿಸಿದ್ದು, ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಮತ್ತೋರ್ವ ಅಧಿಕಾರಿ ಹೇಳಿದರು.
ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಯಾವುದೇ ವದಂತಿಗಳಿಗೆ ಬಲಿಯಾಗದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದೇವೆ. ಈ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಕೆಲವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


