ಜಿ-20 ಶೃಂಗಸಭೆಗೆ ಆಗಮಿಸಿದ್ದ ಮಾರಿಷಸ್ ಪ್ರಧಾನಿ ವಾರಣಾಸಿಗೆ ಭೇಟಿ
ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಲು ಭಾರತಕ್ಕೆ ಬಂದಿದ್ದ ವಿದೇಶಗಳ ನಾಯಕರ ಪೈಕಿ ಕೆಲವರು, ಇನ್ನೂ ಭಾರತ ಪ್ರವಾಸವನ್ನು ಮುಂದುವರೆಸಿದ್ದಾರೆ.

ನವದೆಹಲಿ: ಜಿ-20 ಶೃಂಗಸಭೆಯಲ್ಲಿ ಭಾಗಿಯಾಗಲು ಭಾರತಕ್ಕೆ ಬಂದಿದ್ದ ವಿದೇಶಗಳ ನಾಯಕರ ಪೈಕಿ ಕೆಲವರು, ಇನ್ನೂ ಭಾರತ ಪ್ರವಾಸವನ್ನು ಮುಂದುವರೆಸಿದ್ದಾರೆ.
ಸೌದಿ ಯುವರಾಜ ಭಾರತದ ಪ್ರವಾಸ ಮುಂದುವರೆಸಿ, ಪ್ರಧಾನಿಯೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರೆ, ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜಗ್ನಾಥ್ ವಾರಣಾಸಿಗೆ ಭೇಟಿ ನೀಡಿದ್ದಾರೆ.
ಪ್ರವಿಂದ್ ಕುಮಾರ್ ಜಗ್ನಾಥ್ ಅವರು ಎರಡನೇ ಬಾರಿಗೆ ವಾರಣಾಸಿಗೆ ಭೇಟಿ ನೀಡಿದ್ದಾರೆ. ಪತ್ನಿ ಕೊಬಿತಾ ಜಗ್ನಾಥ್ ಹಾಗೂ 17 ಸದಸ್ಯರ ನಿಯೋಗದೊಂದಿಗೆ ಪ್ರವಿಂದ್ ಕುಮಾರ್ ಜಗ್ನಾಥ್ ಅವರು ಈ ಹಿಂದೆ ಏಪ್ರಿಲ್ ನಲ್ಲಿ ವಾರಣಾಸಿಗೆ ಭೇಟಿ ನೀಡಿ ಕಾಶಿ ವಿಶ್ವನಾಥ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದರು. ಕಾಶಿ ವಿಶ್ವನಾಥ ಕಾರಿಡಾರ್ ಗೆ ಭೇಟಿ ನೀಡಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


