ದೇವಸ್ಥಾನದಿಂದ ಹಿಂದಿರುಗುವಾಗ ಭೀಕರ ಅಪಘಾತ: ಒಂದೇ ಕುಟುಂಬದ ಆರು ಮಂದಿ ದಾರುಣ ಸಾವು
ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಸೋಮವಾರ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಜೈಪುರ: ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ ಸೋಮವಾರ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇವರೆಲ್ಲರೂ, ಧೋಲಾಪುರ ಜಿಲ್ಲೆಯ ಸಿಕರ್‌ನಲ್ಲಿರುವ ಶ್ಯಾಮ್‌ಜಿ ದೇಗುಲಕ್ಕೆ ಭೇಟಿ ನೀಡಿ ಮರಳುತ್ತಿದ್ದರು. ತಡರಾತ್ರಿ 1 ಗಂಟೆ ವೇಳೆಗೆ ಈ ಘಟನೆ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ 2 ಗೂಳಿಗಳ ಶವಗಳೂ ಕೂಡ ಪತ್ತೆಯಾಗಿದ್ದು, ಗೂಳಿಗಳ ಕಾಳಗದಿಂದಾಗಿ ಅಪಘಾತ ಸಂಭವಿಸಿದೆ ಎಂದು ಮಾಹಿತಿ ನೀಡಿದ್ದಾರೆ. ಡಿಕ್ಕಿಯಾದ ಪರಿಣಾಮ ಕಾರು ಪರಿಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಮೃತರನ್ನು ಹರೇಂದ್ರ ಸಿಂಗ್ (32), ಅವರ ಪತ್ನಿ ಮಮತಾ (30), ಅವರ ಮಗಳು ಜಾನ್ವಿ (6), ಮಮತಾ ಅವರ ಸಹೋದರಿ ಸುಧಾ (35), ಅವರ ಪತಿ ಸಂತೋಷ್ (37) ಮತ್ತು ಅವರ ಮಗ ಅನುಜ್ (5) ಎಂದು ಗುರುತಿಸಲಾಗಿದೆ.
ಪೊಲೀಸ್ ಠಾಣೆಯ ಬಳಿಯೇ ಅಪಘಾತ ಸಂಭವಿಸಿದ್ದು, ತಕ್ಷಣವೇ ಪೊಲೀಸರು ಸ್ಥಳಕ್ಕೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆರು ಮಂದಿ ಆಸ್ಪತ್ರೆಗೆ ಬರುವಾಗಲೇ ಮೃತ ಪಟ್ಟಿದ್ದರು
ಇಬ್ಬರು ಅಪ್ರಾಪ್ತರು ಗಾಯಗಳೊಂದಿಗೆ ಪಾರಾಗಿದ್ದು, ಮಗುವೊಂದು ಯಾವುದೇ ಗಾಯಗಳಿಲ್ಲದೆ ಪಾರಾಗಿದೆ. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆ ಮಾಡಿ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


