ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ: ಉಗ್ರರ ಗುಂಡೇಟಿಗೆ ಕುಕಿ-ಝೋ ಬುಡಕಟ್ಟಿನ ಮೂವರು ಬಲಿ!
ಗಲಭೆ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಮಣಿಪುರ: ಗಲಭೆ ಪೀಡಿತ ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು ಕುಕಿ-ಝೋ ಬುಡಕಟ್ಟು ಸಮುದಾಯದ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ನಿಷೇಧಿತ ಉಗ್ರ ಸಂಘಟನೆಯ ಉಗ್ರರು ಈ ಹತ್ಯೆ ಮಾಡಿದ್ದು, ಮಣಿಪುರದ ಕಂಗ್ಪೋಪ್ಕಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ದುಷ್ಕರ್ಮಿಗಳು ವಾಹನದಲ್ಲಿ ಬಂದು ಇಂಫಾಲ್ ಪಶ್ಚಿಮ ಮತ್ತು ಕಾಂಗ್‌ಪೋಕಿ ಜಿಲ್ಲೆಗಳ ಗಡಿ ಭಾಗದಲ್ಲಿರುವ ಇರೆಂಗ್ ಮತ್ತು ಕರಮ್ ಪ್ರದೇಶಗಳ ನಡುವಿನ ಗ್ರಾಮಸ್ಥರ ಮೇಲೆ ದಾಳಿ ನಡೆಸಿದ್ದಾರೆ.
ಈ ಗ್ರಾಮವು ಬೆಟ್ಟಗಳಲ್ಲಿ ನೆಲೆಗೊಂಡಿದೆ ಮತ್ತು ಬುಡಕಟ್ಟು ಜನರ ಪ್ರಾಬಲ್ಯವನ್ನು ಹೊಂದಿದೆ. ಸೆಪ್ಟೆಂಬರ್ 8 ರಂದು ತೆಂಗ್ನೌಪಾಲ್ ಜಿಲ್ಲೆಯ ಪಲ್ಲೆಲ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೂವರು ಸಾವನ್ನಪ್ಪಿ, 50 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಯ ಬೆನ್ನಲ್ಲೇ ಈ ಘಟನೆ ನಡೆದಿದೆ.
ಪರಿಶಿಷ್ಟ ಪಂಗಡದ ಸ್ಥಾನಮಾನಕ್ಕಾಗಿ ಬಹುಸಂಖ್ಯಾತ ಮೈತೆ ಸಮುದಾಯದ ಬೇಡಿಕೆಯ ವಿರುದ್ಧ ಪ್ರತಿಭಟಿಸಲು ಬೆಟ್ಟದ ಪ್ರದೇಶಗಳಲ್ಲಿರುವ ಜಿಲ್ಲೆಗಳಲ್ಲಿ 'ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ' ಆಯೋಜಿಸಿದ ನಂತರ ಮೇ.03 ರಿಂದ ಆರಂಭವಾದ ಮಣಿಪುರದ ಜನಾಂಗೀಯ ಹಿಂಸಾಚಾರದಲ್ಲಿ ಈ ವರೆಗೂ 160 ಮಂದಿ ಸಾವನ್ನಪ್ಪಿದ್ದಾರೆ.
ಮಣಿಪುರದಲ್ಲಿ ಮೈತೆ ಸಮುದಾಯದವರು ಶೇ.'53 ರಷ್ಟಿದ್ದು, ಇಂಫಾಲ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ನಾಗ, ಕುಕಿ ಸಮುದಾಯಗಳು ಶೇ.40 ರಷ್ಟಿದ್ದು ಬೆಟ್ಟದ ಪ್ರದೇಶಗಳಲ್ಲಿರುವ ಜಿಲ್ಲೆಗಳಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


