ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್ ಎಸ್ ನಾಯಕಿ ಕವಿತಾಗೆ ಮತ್ತೆ ಇಡಿ ಸಮನ್ಸ್
ರಾಷ್ಟ್ರ ರಾಜಧಾನಿಯಲ್ಲಿನ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ನಾಯಕಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಶುಕ್ರವಾರ ಮತ್ತೆ ಸಮನ್ಸ್ ಜಾರಿ....

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿನ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ನಾಯಕಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರ ಪುತ್ರಿ ಕೆ ಕವಿತಾ ಅವರಿಗೆ ಜಾರಿ ನಿರ್ದೇಶನಾಲಯ ಶುಕ್ರವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.
ಮಾರ್ಚ್‌ನಲ್ಲಿ ಇಡಿ ಪ್ರಧಾನ ಕಛೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಕವಿತಾ ಅವರಿಗೆ ಮತ್ತೆ ಸೆಪ್ಟೆಂಬರ್ 15 ರಂದು ದೆಹಲಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಪುತ್ರಿ ಕವಿತಾ ಅವರನ್ನು ಮಾರ್ಚ್ 11 ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮೊದಲು ಬಾರಿ ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.
ಇದನ್ನು ಓದಿ: ದೆಹಲಿ ಅಬಕಾರಿ ನೀತಿ ಹಗರಣ: ಖಾಸಗಿತನದ ಹಕ್ಕು ಪ್ರಸ್ತಾಪಿಸಿ ಇಡಿ ಗೆ ಕವಿತಾ ಪತ್ರ, ಮೊಬೈಲ್ ಫೋನ್ಗಳ ಹಸ್ತಾಂತರ
ನಂತರ ಮಾರ್ಚ್ 16 ರಂದು ಅವರಿಗೆ ಮತ್ತೆ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ, ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿರುವ ಅರ್ಜಿಯನ್ನು ಉಲ್ಲೇಖಿಸಿ ವಿಚಾರಣೆಯಿಂದ ಹೊರಗುಳಿದಿದ್ದರು. ಈ ಮನವಿಯನ್ನು ತಿರಸ್ಕರಿಸಿದ್ದ ಇಡಿ ಅಧಿಕಾರಿಗಳು ಮಾರ್ಚ 20 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


