ಭಯೋತ್ಪಾದನಾ ಚಟುವಟಿಕೆಯ ಕಿಂಗ್ ಪಿನ್ ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ದೆಹಲಿಯಲ್ಲಿ ಬಂಧಿಸಿದ NIA
ಶಿವಮೊಗ್ಗ ಮೂಲದ ಭಯೋತ್ಪಾದಕ ಸಂಚುಗಾರ ಅರಾಫತ್ ಅಲಿ ಎಂಬಾತನನ್ನು ಎನ್ಐಎ ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ನವದೆಹಲಿ: ಶಿವಮೊಗ್ಗ ಮೂಲದ ಭಯೋತ್ಪಾದಕ ಸಂಚುಗಾರ ಅರಾಫತ್ ಅಲಿ ಎಂಬಾತನನ್ನು ಎನ್ಐಎ ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ನೈರೋಬಿಯಾದಿಂದ ದೆಹಲಿಗೆ ಆಗಮಿಸಿದ್ದ ತೀರ್ಥಹಳ್ಳಿ ಮೂಲದ ಅರಾಫತ್ ಅಲಿ ಬಂಧಿತ ಆರೋಪಿಯಾಗಿದ್ದಾನೆ. ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಆದರೆ, ಉಗ್ರ ಚಟುವಟಿಕೆಗಳಿಗೆ ವಿದೇಶಗಳಲ್ಲಿಯೇ ಕುಳಿತು ಹಣದ ವ್ಯವಸ್ಥೆ ಮಾಡುತ್ತಿದ್ದ. 2020ರಲ್ಲಿ ಕರ್ನಾಟಕದ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಮತೀನ್ ಜೊತೆಗೆ ಅರಾಫತ್ ಅಲಿ ದೇಶ ಬಿಟ್ಟು ಹೋಗಿದ್ದನು.
ಅರಾಫತ್ ಅಲಿ ವಿದೇಶದಿಂದ ಕೆಲಸ ಮಾಡುತ್ತಿದ್ದು ಮುಸ್ಲಿಂ ಯುವಕರನ್ನು ಗುರುತಿಸುವುದು, ಆಮೂಲಾಗ್ರಗೊಳಿಸುವುದು ಮತ್ತು ಐಎಸ್‌ಗೆ ಸೇರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದನು.
ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದ ಭಾಗವಾಗಿ ಮೊಹಮ್ಮದ್ ಶಾರಿಕ್ ಎಂಬ ಆರೋಪಿ ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಪ್ರೆಶರ್ ಕುಕ್ಕರ್ ಐಇಡಿ ಅಳವಡಿಸಲು ತೆರಳುತ್ತಿದ್ದನು. ಆದರೆ, ಆಟೋ ರಿಕ್ಷಾದಲ್ಲಿ ಆಕಸ್ಮಿಕವಾಗಿ ಐಇಡಿ ಸ್ಫೋಟಗೊಂಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


