ತಮಿಳುನಾಡು: ಮಹಿಳೆಯರಿಗೆ ಮಾಸಿಕ 1,000 ರೂ. ಒದಗಿಸುವ ಯೋಜನೆಗೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಚಾಲನೆ
ಕರ್ನಾಟಕದಲ್ಲಿ ಜಾರಿಯಲ್ಲಿರುವಂತೆಯೇ ಮಹಿಳೆಯರಿಗೆ ಮಾಸಿಕ ಆರ್ಥಿಕ ನೆರವು ಯೋಜನೆ ಒದಗಿಸುವ ಯೋಜನೆ ನೆರೆಯ ತಮಿಳುನಾಡಿನಲ್ಲಿಯೂ ಚಾಲನೆಗೊಂಡಿದೆ. ದ್ರಾವಿಡ ಐಕಾನ್ ಸಿ ಎನ್ ಅಣ್ಣಾದೊರೈ ಅವರ ಜನ್ಮದಿನವಾದ ಇಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಹಿಳೆಯರಿಗೆ ಮಾಸಿಕ 1,000 ರೂ. ಆರ್ಥಿಕ ನೆರವು ಒದಗಿಸುವ ಯೋಜನೆಗೆ ಚಾಲನೆ ನೀಡಿದರು.

ಚೆನ್ನೈ: ಕರ್ನಾಟಕದಲ್ಲಿ ಜಾರಿಯಲ್ಲಿರುವಂತೆಯೇ ಮಹಿಳೆಯರಿಗೆ ಮಾಸಿಕ ಆರ್ಥಿಕ ನೆರವು ಯೋಜನೆ ಒದಗಿಸುವ ಯೋಜನೆ ನೆರೆಯ ತಮಿಳುನಾಡಿನಲ್ಲಿಯೂ ಚಾಲನೆಗೊಂಡಿದೆ. ದ್ರಾವಿಡ ಐಕಾನ್ ಸಿ ಎನ್ ಅಣ್ಣಾದೊರೈ ಅವರ ಜನ್ಮದಿನವಾದ ಇಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮಹಿಳೆಯರಿಗೆ ಮಾಸಿಕ 1,000 ರೂ. ಆರ್ಥಿಕ ನೆರವು ಒದಗಿಸುವ ಯೋಜನೆಗೆ ಚಾಲನೆ ನೀಡಿದರು.
ಚೆನ್ನೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಜನೆಗೆ ಚಾಲನೆ ನೀಡಿ, ಹಲವಾರು ಫಲಾನುಭವಿಗಳಿಗೆ ಬ್ಯಾಂಕ್ ಡೆಬಿಟ್ ಕಾರ್ಡ್ ಗಳನ್ನು ಸ್ಟಾಲಿನ್ ವಿತರಿಸಿದರು. ರಾಜ್ಯ ಸಚಿವರು ತಮ್ಮ ಜಿಲ್ಲೆಗಳಲ್ಲಿ ಈ ಯೋಜನೆಗೆ ಚಾಲನೆ ನೀಡಿದರು.ಮಹಿಳೆಯರ ಮೂಲ ಆದಾಯದ ಕಾರ್ಯಕ್ರಮವಾಗಿರುವ ಇದಕ್ಕೆ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಹೆಸರನ್ನು ಇಡಲಾಗಿದೆ. ಇದು ಮಹಿಳೆಯರ ಹಕ್ಕು ಎಂದು ರಾಜ್ಯ ಸರ್ಕಾರ ಹೇಳಿದೆ.
ಯೋಜನೆ ಅಡಿಯಲ್ಲಿ 1.06 ಕೋಟಿ ಮಹಿಳೆಯರನ್ನು (1,06,50,000) ಫಲಾನುಭವಿಗಳೆಂದು ಸರ್ಕಾರ ಗುರುತಿಸಿದೆ ಮತ್ತು 1,000 ರೂ ಆರ್ಥಿಕ ನೆರವನ್ನು ಫಲಾನುಭವಿಗಳಿಗೆ ನೇರ ಲಾಭ ವರ್ಗಾವಣೆ ಮೂಲಕ ಪಾವತಿಸಲಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


