ದೇಶ

ಜಗನ್ ವಿರುದ್ಧ ಹೋರಾಡಲು ಯಾವುದೇ ಪಕ್ಷದೊಂದಿಗೆ ಕೈ ಜೋಡಿಸಲು ಸಿದ್ಧ: ನಾರಾ ಲೋಕೇಶ್

ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಡಲು ಇತರ ಯಾವುದೇ ಪಕ್ಷದೊಂದಿಗೆ ಕೈ ಜೋಡಿಸಲು ಸಿದ್ಧ ಎಂದು ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರ...

ಜಗನ್ ವಿರುದ್ಧ ಹೋರಾಡಲು ಯಾವುದೇ ಪಕ್ಷದೊಂದಿಗೆ ಕೈ ಜೋಡಿಸಲು ಸಿದ್ಧ: ನಾರಾ ಲೋಕೇಶ್
ನಾರಾ ಲೋಕೇಶ್
Published On :

ವಿಜಯವಾಡ: ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ ಹೋರಾಡಲು ಇತರ ಯಾವುದೇ ಪಕ್ಷದೊಂದಿಗೆ ಕೈ ಜೋಡಿಸಲು ಸಿದ್ಧ ಎಂದು ಟಿಡಿಪಿ ನಾಯಕ ಎನ್ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಅವರು ಶನಿವಾರ ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಆಂಧ್ರಪ್ರದೇಶ ಪೊಲೀಸರು ಬಂಧಿಸಿರುವುದು ನಮ್ಮ ಪಕ್ಷದ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸುವ "ಪ್ರಸಿದ್ಧ ಭ್ರಷ್ಟ" ಮುಖ್ಯಮಂತ್ರಿಯ ಪ್ರಯತ್ನ ಎಂದು ಟಿಡಿಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ವಿರುದ್ಧದ ಸಿಬಿಐ, ಇಡಿಯಂತಹ ಕೇಂದ್ರ ತನಿಖಾ ಸಂಸ್ಥೆಗಳು ದಾಖಲಿಸಿದ ಹಣದ ದುರುಪಯೋಗ ಸೇರಿದಂತೆ ಹಲವು ಕ್ರಿಮಿನಲ್ ಪ್ರಕರಣಗಳ ತನಿಖೆ "ಆಮೆ ಗತಿ"ಯಲ್ಲಿ ಸಾಗುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ನಾರಾ ಲೋಕೇಶ್ ಹೇಳಿದ್ದಾರೆ.

"ಸ್ಪಷ್ಟವಾಗಿ, ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ. ಮುಖ್ಯಮಂತ್ರಿ ಜಾಮೀನಿನ ಮೇಲೆ ಸಂತೋಷದಿಂದ ಹೊರಗಿದ್ದಾರೆ. ಅವರು ಈಗ ಜಾಮೀನಿನ ಮೇಲೆ ತಮ್ಮ 10ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದಾರೆ. ಆದರೆ ಅವರ ವಿರುದ್ಧ ಸಿಬಿಐ 42,000 ಕೋಟಿ ರೂಪಾಯಿ ದುರ್ಬಳಕೆಗಾಗಿ ಚಾರ್ಜ್ ಶೀಟ್ ಸಲ್ಲಿಸಿದೆ ಎಂದಿದ್ದಾರೆ.

"ಅವರು ಸಾಧ್ಯವಿರುವ ಪ್ರತಿಯೊಬ್ಬ ಸಾಕ್ಷಿಯ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಇದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ" ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪುತ್ರ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.