ದೆಹಲಿ; ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ; ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲು
ವ್ಯಕ್ತಿಯೊಬ್ಬ ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ರಾಜೌರಿ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.

ನವದೆಹಲಿ: ವ್ಯಕ್ತಿಯೊಬ್ಬ ಬೀದಿನಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ರಾಜೌರಿ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ದಾಖಲಾಗಿದೆ.
ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 ಮತ್ತು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 11 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಪ ಪೊಲೀಸ್ ಆಯುಕ್ತ (ಪಶ್ಚಿಮ ಜಿಲ್ಲೆ) ವಿಚಿತ್ರಾ ವೀರ್ ಮಾತನಾಡಿ, 'ವಿಡಿಯೋದ ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸತ್ಯಾಸತ್ಯತೆ ದೃಢಪಟ್ಟ ನಂತರ ನಾವು ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇವೆ' ಎಂದು ಹೇಳಿದರು.
ಬಳಿಕವೇ ಆರೋಪಿಯ ಬಂಧನಕ್ಕೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ದೂರುದಾರರು ಪೊಲೀಸರಿಗೆ ಸಲ್ಲಿಸಿದ ಘಟನೆಯ ಉದ್ದೇಶಿತ ವಿಡಿಯೋ ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೀದಿ ನಾಯಿಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಬಗ್ಗೆ ಸ್ಥಳೀಯರೊಬ್ಬರು ದೂರು ಸಲ್ಲಿಸಿರುವುದಾಗಿ ಡಿಸಿಪಿ ತಿಳಿಸಿದ್ದಾರೆ.
'ಈ ಪ್ರದೇಶದಲ್ಲಿ ಬೀದಿನಾಯಿಗಳ ಮೇಲೆ ದೌರ್ಜನ್ಯ ಎಸಗುತ್ತಿರುವ ವ್ಯಕ್ತಿಯನ್ನು ತಾನು ನೋಡಿದ್ದೇನೆ ಎಂದು ದೂರುದಾರರು ಹೇಳಿದ್ದಾರೆ. ಅವರು ವಿಡಿಯೋವನ್ನು ಪೊಲೀಸರಿಗೆ ಸಲ್ಲಿಸಿದ್ದಾರೆ'.
ಈ ಸಂಬಂಧ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


