ದೇಶ

ತೆಲಂಗಾಣ: ಮಹಿಳೆಯರಿಗೆ ಮಾಸಿಕ ರೂ. 2,500 ಆರ್ಥಿಕ ನೆರವು ಸೇರಿದಂತೆ 6 ಗ್ಯಾರಂಟಿ ಘೋಷಿಸಿದ ಸೋನಿಯಾ ಗಾಂಧಿ

ಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್ ಬರಪೂರ ಯೋಜನೆಗಳನ್ನು ಘೋಷಿಸಿದೆ. ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಚುನಾವಣಾ ರ‍್ಯಾಲಿಯಲ್ಲಿ ಮಹಿಳೆಯರಿಗೆ ಮಾಸಿಕ ರೂ. 2,500 ಆರ್ಥಿಕ ನೆರವು ಸೇರಿದಂತೆ 6 ಗ್ಯಾರಂಟಿಗಳನ್ನು ಘೋಷಿಸಿದರು.

ತೆಲಂಗಾಣ: ಮಹಿಳೆಯರಿಗೆ ಮಾಸಿಕ ರೂ. 2,500 ಆರ್ಥಿಕ ನೆರವು ಸೇರಿದಂತೆ 6 ಗ್ಯಾರಂಟಿ ಘೋಷಿಸಿದ ಸೋನಿಯಾ ಗಾಂಧಿ
ಸೋನಿಯಾ ಗಾಂಧಿ
Published On :

ಹೈದರಾಬಾದ್: ಕರ್ನಾಟಕದಂತೆ ತೆಲಂಗಾಣದಲ್ಲೂ ಕಾಂಗ್ರೆಸ್ ಬರಪೂರ ಯೋಜನೆಗಳನ್ನು ಘೋಷಿಸಿದೆ. ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಚುನಾವಣಾ  ರ‍್ಯಾಲಿಯಲ್ಲಿ ಮಹಿಳೆಯರಿಗೆ ಮಾಸಿಕ ರೂ. 2,500 ಆರ್ಥಿಕ ನೆರವು ಸೇರಿದಂತೆ 6 ಗ್ಯಾರಂಟಿಗಳನ್ನು ಘೋಷಿಸಿದರು.

ತೆಲಂಗಾಣದ ಮಹಿಳೆಯರಿಗೆ ಮಹಾಲಕ್ಷ್ಮಿ ಯೋಜನೆಯಡಿ ಮಾಸಿಕ ₹2,500 ಆರ್ಥಿಕ ನೆರವು, ₹500ಕ್ಕೆ ಗ್ಯಾಸ್ ಸಿಲಿಂಡರ್, ರಾಜ್ಯಾದ್ಯಂತ ಟಿಎಸ್‌ಆರ್‌ಸಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ, ತೆಲಂಗಾಣ ಜನತೆಯ ಆಶೋತ್ತರಗಳನ್ನು ಈಡೇರಿಸಲು ನಾವು 6 ಭರವಸೆಗಳನ್ನು ಘೋಷಿಸುತ್ತಿದ್ದೇವೆ, ಅವುಗಳಲ್ಲಿ ಪ್ರತಿಯೊಂದನ್ನು ಪೂರೈಸಲು ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದರು. 

ಹೈದರಾಬಾದ್ ಸಮೀಪದ ತುಕ್ಕುಗುಡದಲ್ಲಿ ನಡೆದ ಚುನಾವಣಾ  ರ‍್ಯಾಲಿಯಲ್ಲಿ ಮಾತನಾಡಿದ ಸೋನಿಯಾ ಗಾಂಧಿ, ತೆಲಂಗಾಣದಲ್ಲಿ ಕಾಂಗ್ರೆಸ್ ಸರ್ಕಾರ ಕಾಣುವುದು ನನ್ನ ಕನಸು, ಅದು ಸಮಾಜದ ಎಲ್ಲಾ ವರ್ಗಗಳ ಪರ ಕೆಲಸ ಮಾಡಲಿದ್ದು, ಕಾಂಗ್ರೆಸ್  ಬೆಂಬಲಿಸುವಂತೆ ಜನತೆಯಲ್ಲಿ ಅವರು ಮನವಿ ಮಾಡಿದರು. 

ತೆಲಂಗಾಣ ರಾಜ್ಯ ಉದಯದಲ್ಲಿ ನಾನು ನನ್ನ ಸಹೋದ್ಯೋಗಿಗಳೊಂದಿಗೆ ಭಾಗಿಯಾದ ಅವಕಾಶ ಸಿಕ್ಕಿತ್ತು. ಈಗ ರಾಜ್ಯದ ಅಭಿವೃದ್ಧಿಗಾಗಿ ಆರು ಗ್ಯಾರಂಟಿಗಳನ್ನು ಘೋಷಿಸಿದ್ದು, ಅವುಗಳನ್ನು ಪೂರೈಸಲು ನಾವು ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.