ದೇಶ

ಬೆಂಗಳೂರು ಏರ್'ಪೋರ್ಟ್ ಕೊಂಡಾಡಿದ ನಟ ಮಾಧವನ್: ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ

ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಕಾರ್ಯಾರಂಭ ಮಾಡಿರುವ 2ನೇ ಟರ್ಮಿನಲ್ ನಲ್ಲಿರುವ ಮೂಲಸೌಕರ್ಯಕ್ಕೆ ಪ್ರಸಿದ್ಧ ನಟ, ನಿರ್ದೇಶಕ ಹಾಗೂ ಲೇಖಕ ಆರ್.ಮಾಧವನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಏರ್'ಪೋರ್ಟ್ ಕೊಂಡಾಡಿದ ನಟ ಮಾಧವನ್: ಪ್ರತಿಕ್ರಿಯೆ ನೀಡಿದ ಪ್ರಧಾನಿ ಮೋದಿ
ಸಂಗ್ರಹ ಚಿತ್ರ
Published On :

ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಕಾರ್ಯಾರಂಭ ಮಾಡಿರುವ 2ನೇ ಟರ್ಮಿನಲ್ ನಲ್ಲಿರುವ ಮೂಲಸೌಕರ್ಯಕ್ಕೆ ಪ್ರಸಿದ್ಧ ನಟ, ನಿರ್ದೇಶಕ ಹಾಗೂ ಲೇಖಕ ಆರ್.ಮಾಧವನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿ ವಿಡಿಯೋ ಸಂದೇಶವನ್ನು ಬಿತ್ತರಿಸಿದ್ದಾರೆ. ಇದಕ್ಕೆ ಲಕ್ಷಾಂತರ ಲೈಕ್ ಗಳು ಬಂದಿದ್ದು, ಪ್ರಧಾನಮಂತ್ರಿ  ನರೇಂದ್ರ  ಮೋದಿಯವರೂ ಕೂಡ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತದ ಮೂಲಸೌಕರ್ಯ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆ ಅವಿಸ್ಮರಣೀಯ. ನಾನೀಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದ್ದೇನೆ. ಇದು ನೋಡಲು ಅತ್ಯಾಕರ್ಷಕವಾಗಿದೆ. ಇದೊಂದು ವಿಮಾನ ನಿಲ್ದಾಣವೆಂದರೆ ಯಾರೂ ನಂಬುವುದಿಲ್ಲ. ಇಲ್ಲಿರುವ ಮೂಲಸೌಕರ್ಯ ವಿಶ್ವದಲ್ಲೇ ಅತ್ಯುತ್ತಮವಾದುದರಲ್ಲಿ ಒಂದಾಗಿದೆ. ಹೆಮ್ಮೆಯಾಗುತ್ತಿದೆ ಎಂದು ವಿಡಿಯೋ ಮಾಡಿದ್ದಾರೆ.

ಮಾಧವನ್ ಅವರ ಈ ವಿಡಿಯೋವನ್ನು ಪ್ರಧಾನಿ ಮೋದಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯ ಸ್ಟೋರಿಯಲ್ಲಿ ಶೇರ್ ಮಾಡಿಕೊಂಡಿದ್ದು, ಅದರಲ್ಲಿ 'ಭಾರತದ ಅಭಿವೃದ್ಧಿಗಾಗಿ ನೆಕ್ಸ್ಟ್ ಜನರೇಷನ್ ಮೂಲಭೂತ ಸೌಕರ್ಯಗಳು..' ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.