ಇಂದು 'ಜಿ20 ಟೀಂ' ಜೊತೆಗೆ ಪ್ರಧಾನಿ ಮೋದಿ ಸಂವಾದ, ಭೋಜನ!
ಜಿ20 ಶೃಂಗಸಭೆ ಯಶಸ್ವಿಯಾಗುವಲ್ಲಿ ಪ್ರಮುಖವಾದ ಪಾತ್ರ ನಿರ್ವಹಿಸಿದ್ದ ಜಿ20 ಟೀಂ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭಾರತ್ ಮಂಟಪದಲ್ಲಿ ಸಂವಾದ ನಡೆಸಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.

ನವದೆಹಲಿ: ಜಿ20 ಶೃಂಗಸಭೆ ಯಶಸ್ವಿಯಾಗುವಲ್ಲಿ ಪ್ರಮುಖವಾದ ಪಾತ್ರ ನಿರ್ವಹಿಸಿದ್ದ ಜಿ20 ಟೀಂ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭಾರತ್ ಮಂಟಪದಲ್ಲಿ ಸಂವಾದ ನಡೆಸಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.
ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಸಂವಾದದ ನಂತರ ಭೋಜನ ಸವಿಯಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಜಿ20 ಶೃಂಗಸಭೆಯ ಯಶಸ್ಸಿಗೆ ಕೊಡುಗೆ ನೀಡಿದ ಸುಮಾರು 3,000 ಜನರು ಸಂವಾದದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ.
ಇದು ವಿಶೇಷವಾಗಿ ಶೃಂಗಸಭೆಯನ್ನು ಸುಗಮವಾಗಿ ನಡೆಸಲು ನೆಲಮಟ್ಟದಲ್ಲಿ ಕೆಲಸ ಮಾಡಿದವರನ್ನು ಒಳಗೊಂಡಿರುತ್ತದೆ. ಇವರಲ್ಲಿ ಕ್ಲೀನರ್‌ಗಳು, ಚಾಲಕರು, ವೇಟರ್‌ಗಳು ಮತ್ತು ವಿವಿಧ ಸಚಿವಾಲಯಗಳ ಇತರ ಸಿಬ್ಬಂದಿಗಳು ಸೇರಿದ್ದಾರೆ. ಸಂವಾದದಲ್ಲಿ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


