ಜಮ್ಮು-ಕಾಶ್ಮೀರ: 4 ವರ್ಷಗಳ ಬಳಿಕ ಗೃಹ ಬಂಧನದಿಂದ ಮಿರ್ವೈಜ್ ಫಾರೂಕ್'ಗೆ ಮುಕ್ತಿ
4 ವರ್ಷಗಳ ಕಾಲ ಗೃಹ ಬಂಧನದಲ್ಲಿದ್ದ ಹುರಿಯತ್ ಕಾನ್ಫರೆನ್ಸ್‌ನ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.

ಶ್ರೀನಗರ: 4 ವರ್ಷಗಳ ಕಾಲ ಗೃಹ ಬಂಧನದಲ್ಲಿದ್ದ ಹುರಿಯತ್ ಕಾನ್ಫರೆನ್ಸ್‌ನ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.
ಸಂವಿಧಾನದ 370ನೇ ವಿಧಿಯಡಿ ಈ ಹಿಂದಿನ ಜಮ್ಮು–ಕಾಶ್ಮೀರ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ 2019ರಲ್ಲಿ ಮಿರ್ವೈಜ್ ಫಾರೂಕ್ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಗೃಹ ಬಂಧನದಲ್ಲಿಸಿದ್ದರು. ನಾಲ್ಕು ವರ್ಷಗಳ ಬಳಿಕ ಫಾರೂಕ್ ಅವರನ್ನು ಬಿಡುಗಡೆ ಮಾಡಲಾಗಿದೆ.
ಗೃಹಬಂಧನದಿಂದ ಮುಕ್ತರಾದ ನಂತರ ಫಾರೂಕ್ ಅವರು, ಐತಿಹಾಸಿಕ ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.
‘ಮಿರ್ವೈಜ್ ಅವರ ನಿವಾಸಕ್ಕೆ ಗುರುವಾರ ಸಂಜೆ ಭೇಟಿ ನೀಡಿದ ಅಧಿಕಾರಿಗಳು, ಗೃಹಬಂಧನದಿಂದ ಮುಕ್ತಗೊಳಿಸುತ್ತಿರುವ ವಿಚಾರವನ್ನು ತಿಳಿಸಿದ್ದರು. ಇದರಂತೆ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ನಡೆಯಲಿರುವ ಪಾರ್ಥನೆಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಟ್ಟಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


