ಬಿಜೆಪಿ ಸಂಸದ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಸಂಸದ ಸ್ಥಾನ ತ್ಯಜಿಸುತ್ತೇನೆ: ಡ್ಯಾನಿಶ್ ಅಲಿ
ಲೋಕಸಭೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ...

ನವದೆಹಲಿ: ಲೋಕಸಭೆಯಲ್ಲಿ ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವ ಬಗ್ಗೆ ಚಿಂತನೆ ನಡೆಸುವುದಾಗಿ ಬಹುಜನ ಸಮಾಜ ಪಕ್ಷದ ಸಂಸದ ಡ್ಯಾನಿಶ್ ಅಲಿ ಅವರು ಶುಕ್ರವಾರ ಹೇಳಿದ್ದಾರೆ.
ದ್ವೇಷ ಭಾಷಣಗಳನ್ನು ಕೇಳಲು ಜನ ನನ್ನನ್ನು ಆಯ್ಕೆ ಮಾಡಿಲ್ಲ ಎಂದು ಕಿಡಿ ಕಾರಿದ ಡ್ಯಾನಿಶ್ ಅಲಿ, "ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಈ ಸಂಬಂಧ ನಾನು ಸ್ಪೀಕರ್‌ಗೆ ಪತ್ರ ಬರೆದಿದ್ದೇನೆ. ಅವರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಭಾವಿಸುತ್ತೇನೆ" ಎಂದಿದ್ದಾರೆ.
"ಇದು ದ್ವೇಷದ ಭಾಷಣಕ್ಕಿಂತ ಕಡಿಮೆ ಇಲ್ಲ. ಇದು ಸದನದಲ್ಲಿ ನಡೆದ ದ್ವೇಷದ ಭಾಷಣವಾಗಿದೆ. ಇಷ್ಟು ದಿನ ಸಂಸತ್ತಿನ ಹೊರಗೆ ದ್ವೇಷ ಭಾಷಣಗಳನ್ನು ಮಾಡಲಾಗುತ್ತಿತ್ತು. ಆದರೆ ಈಗ ಬಿಜೆಪಿ ಸಂಸದ ಸದನದೊಳಗೇ ದ್ವೇಷ ಭಾಷಣ ಮಾಡಿದ್ದಾರೆ" ಎಂದು ಡ್ಯಾನಿಶ್ ಅಲಿ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ನೀವು ಏನು ಮಾಡುತ್ತೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅಲಿ, "ಸ್ಪೀಕರ್ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ ಎಂದು ನಾನು ನಿರೀಕ್ಷಿಸುತ್ತೇನೆ. ಆದರೆ ಕ್ರಮ ಕೈಗೊಳ್ಳದಿದ್ದರೆ, ಭಾರವಾದ ಹೃದಯದಿಂದ ನನ್ನ ಲೋಕಸಭಾ ಸದಸ್ಯತ್ವ ತ್ಯಜಿಸುವ ಬಗ್ಗೆ ಯೋಚಿಸುತ್ತೇನೆ. ಏಕೆಂದರೆ ದ್ವೇಷ ಭಾಷಣಗಳನ್ನು ಕೇಳಲು ಜನ ನನ್ನನ್ನು ಸಂಸತ್ತಿಗೆ ಕಳುಹಿಸಿಲ್ಲ ಎಂದಿದ್ದಾರೆ.
ಭಾರತದ ಚಂದ್ರಯಾನ-3 ರ ಯಶಸ್ಸಿನ ಚರ್ಚೆಯ ವೇಳೆ ಮಾತನಾಡಿದ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರು ಡ್ಯಾನಿಶ್ ಅಲಿ ಅವರನ್ನು ಭಯೋತ್ಪಾದಕ, ಉಗ್ರಗಾಮಿ ಮತ್ತು ಪಿಂಪ್ ಎಂದು ನಿಂದಿಸಿದ್ದರು.
ಈ 'ಮುಲ್ಲಾ' ನನ್ನು ಹೊರಹಾಕಿ. "ಈ ಮುಲ್ಲಾ ಒಬ್ಬ ಭಯೋತ್ಪಾದಕ" ಎಂದು ಬಿಧುರಿ ಟೀಕಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


