ದೇಶ

ಹಮ್ಸಫರ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಎಲ್ಲಾ ಪ್ರಯಾಣಿಕರು ಸುರಕ್ಷಿತ; ವೀಡಿಯೊ

ಗುಜರಾತ್‌ನ ವಲ್ಸಾದ್‌ನ ಛಿಪ್‌ವಾಡ್‌ನಲ್ಲಿ ಹಮ್‌ಸಫರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ. ಶನಿವಾರ ಜನರೇಟರ್ ಇಟ್ಟಿದ್ದ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಹಮ್ಸಫರ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ, ಎಲ್ಲಾ ಪ್ರಯಾಣಿಕರು ಸುರಕ್ಷಿತ; ವೀಡಿಯೊ
ರೈಲಿನಲ್ಲಿ ರೈಲು ಅವಘಡ
Published On :

ಗುಜರಾತ್‌ನ ವಲ್ಸಾದ್‌ನ ಛಿಪ್‌ವಾಡ್‌ನಲ್ಲಿ ಹಮ್‌ಸಫರ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ. ಶನಿವಾರ ಜನರೇಟರ್ ಇಟ್ಟಿದ್ದ ರೈಲಿನ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. 

ಬೆಂಕಿಯು ಮೊದಲು ಜನರೇಟರ್‌ನಲ್ಲಿಯೇ ಪ್ರಾರಂಭವಾಯಿತು. ಆದರೆ ಅದರ ಜ್ವಾಲೆಯು ತುಂಬಾ ದೊಡ್ಡದಾಗಿದ್ದು ಅದು ಇಡೀ ಬೋಗಿಯನ್ನು ಆವರಿಸಿತು. ಸಕಾಲದಲ್ಲಿ ಎಲ್ಲ ಪ್ರಯಾಣಿಕರನ್ನು ರೈಲಿನಿಂದ ಹೊರಕಳುಹಿಸಿದ್ದರಿಂದ ಸಮಾಧಾನದ ಸಂಗತಿ.

ಈ ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಆ ವಿಡಿಯೋದಲ್ಲಿ ರೈಲಿನ ಬೋಗಿಯಿಂದ ಜ್ವಾಲೆ ಹೊರ ಬರುತ್ತಿರುವುದು ಕಂಡು ಬಂದಿದೆ. ಹಮ್ಸಫರ್ ರೈಲಿನ ಜನರೇಟರ್ ಬೋಗಿಗೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈಗ ಆ ಬೆಂಕಿ ಹೇಗೆ ಶುರುವಾಯಿತು. ನಿರ್ಲಕ್ಷ್ಯವೇ ಅಥವಾ ಬೇರೆ ಕಾರಣ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಕೆಲವೇ ಹೊತ್ತಿನಲ್ಲಿ ಬೆಂಕಿ ದೊಡ್ಡ ಸ್ವರೂಪ ಪಡೆದು ಮತ್ತೊಂದು ಬೋಗಿ ಸುಟ್ಟು ಕರಕಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.