ಸನಾತನ ಧರ್ಮ ಹೇಳಿಕೆ ವಿವಾದ: ಸುಪ್ರೀಂ ಕೋರ್ಟ್ ನಿಂದ ಯಾವುದೇ ನೋಟಿಸ್ ಬಂದಿಲ್ಲ ಎಂದ ಉದಯನಿಧಿ ಸ್ಟಾಲಿನ್
ಸನಾತನ ಧರ್ಮ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ತಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತಮಿಳುನಾಡು ಸಿಎಂ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.

ಚೆನ್ನೈ: ಸನಾತನ ಧರ್ಮ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿಂದ ತಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ತಮಿಳುನಾಡು ಸಿಎಂ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ನೋಟಿಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಉದಯನಿಧಿ ಸ್ಟಾಲಿನ್, 'ಸುಪ್ರೀಂ ಕೋರ್ಟ್ ನೋಟಿಸ್ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಆದರೆ, ಇದುವರೆಗೆ ಕೋರ್ಟ್ನಿಂದ ಪ್ರತಿಕ್ರಿಯೆ ನೀಡುವಂತೆ ನನಗೆ ಯಾವುದೇ ನೋಟಿಸ್ ಬಂದಿಲ್ಲ’ ಎಂದು ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್ ತಿಳಿಸಿದ್ದಾರೆ.
‘ಸನಾತನ ಧರ್ಮ’ ಕುರಿತು ಹೇಳಿಕೆ ನೀಡಿರುವ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಶುಕ್ರವಾರ ತಮಿಳುನಾಡು ಸರ್ಕಾರ ಮತ್ತು ಉದಯನಿಧಿ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು. ‘ಸನಾತನ ಧರ್ಮ ನಿರ್ಮೂಲನೆ ಮಾಡಬೇಕು’ ಎಂಬ ಹೇಳಿಕೆ ನೀಡಿದ ಉದಯನಿಧಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಿ ಮದ್ರಾಸ್ ಹೈಕೋರ್ಟ್ ವಕೀಲ ಬಿ.ಜಗನ್ನಾಥ ಎಂಬುವರು ಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನೂ ಓದಿ: ಸನಾತನ ಧರ್ಮದ ಕುರಿತು ಹೇಳಿಕೆ: ತಮಿಳುನಾಡಿನ ಸರ್ಕಾರ ಮತ್ತು ಸಚಿವ ಉದಯನಿಧಿ ಸ್ಟಾಲಿನ್ ಗೆ ಸುಪ್ರೀಂ ಕೋರ್ಟ್ ನೋಟಿಸ್
ನ್ಯಾಯಮೂರ್ತಿ ಅನಿರುದ್ಧ ಬೋಸ್ ಮತ್ತು ಬೇಲಾ ಎಂ.ತ್ರಿವೇದಿ ಅವರನ್ನು ಒಳಗೊಂಡ ನ್ಯಾಯಪೀಠವು ಶುಕ್ರವಾರ ಅರ್ಜಿ ವಿಚಾರಣೆ ನಡೆಸಿ ಪ್ರಕರಣ ಸಂಬಂಧ ಉದಯನಿಧಿಗೆ ನೋಟಿಸ್ ಜಾರಿ ಮಾಡಿತ್ತು. ‘ಸೆ.2ರಂದು ನಡೆದ ‘ಸನಾತನ ಧರ್ಮ ನಿರ್ಮೂಲನಾ ಸಮಾವೇಶ’ದಲ್ಲಿ ರಾಜ್ಯದ ಸಚಿವರು ಭಾಗವಹಿಸಿರುವುದನ್ನು ‘ಅಸಾಂವಿಧಾನಿಕ’ ಎಂದು ಘೋಷಣೆ ಮಾಡಬೇಕು. ಈ ಕುರಿತು ಸಿಬಿಐ ತನಿಖೆಗೆ ಸೂಚಿಸಬೇಕು’ ಎಂದೂ ಅವರು ಅರ್ಜಿಯಲ್ಲಿ ಕೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


