ಉತ್ತರ ಪ್ರದೇಶ: ಪತ್ನಿಯ ಗ್ಯಾಂಗ್ ರೇಪ್, ದಂಪತಿ ಆತ್ಮಹತ್ಯೆ!
ಪತ್ನಿಯ ಮೇಲೆ ಗ್ಯಾಂಗ್ ರೇಪ್ ಆದ ಪರಿಣಾಮ ಸಂತ್ರಸ್ತೆ ಹಾಗೂ ಆಕೆಯ ಪತಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಲಖನೌ: ಪತ್ನಿಯ ಮೇಲೆ ಗ್ಯಾಂಗ್ ರೇಪ್ ಆದ ಪರಿಣಾಮ ಸಂತ್ರಸ್ತೆ ಹಾಗೂ ಆಕೆಯ ಪತಿ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. ಈ ಘಟನೆ ಬಗ್ಗೆ ಎಫ್ಐಆರ್ ದಾಖಲಿಸಲಾಗಿದ್ದು ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.
30 ವರ್ಷದ ವ್ಯಕ್ತಿ ಮತ್ತು ಆತನ 27 ವರ್ಷದ ಪತ್ನಿ ವಿಷ ಸೇವಿಸಿದ್ದಾರೆ. ಪತಿ ಅದೇ ದಿನ ಮೃತಪಟ್ಟರೆ, ಪತ್ನಿ ಗೋರಖ್‌ಪುರದ ಆಸ್ಪತ್ರೆಯಲ್ಲಿ ಮರುದಿನ ನಿಧನರಾಗಿದ್ದಾರೆ ಎಂದು ಬಸ್ತಿ ಎಸ್‌ಪಿ ಗೋಪಾಲ್ ಕೃಷ್ಣ ಶನಿವಾರ ತಿಳಿಸಿದ್ದಾರೆ.
ಸೆಪ್ಟೆಂಬರ್ 20 ಮತ್ತು 21 ರ ಮಧ್ಯರಾತ್ರಿ ರುಧೌಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅವರ ಮನೆಯಲ್ಲಿ ಇಬ್ಬರು ವ್ಯಕ್ತಿಗಳು ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ದಂಪತಿಯ ಸಂಬಂಧಿಕರು ಆರೋಪಿಸಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು, ದಂಪತಿಗಳು ಆರೋಪಿಗಳ ಹೆಸರನ್ನು ನಮೂದಿಸಿದ ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಬೆಳಗ್ಗೆ ಶಾಲೆಗೆ ಹೋಗಲು ತಯಾರಾಗುತ್ತಿದ್ದಾಗ, ವಿಷ ಸೇವಿಸಿ ಸಾಯುವುದಾಗಿ ಪೋಷಕರು ತಿಳಿಸಿದ್ದಾರೆ ಎಂದು ದಂಪತಿಯ ಮಕ್ಕಳು ಪೊಲೀಸರಿಗೆ ತಿಳಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ದಂಪತಿಗೆ ಎಂಟು ಮತ್ತು ಆರು ವರ್ಷದ ಇಬ್ಬರು ಗಂಡು ಮಕ್ಕಳು ಮತ್ತು ಒಂದು ವರ್ಷದ ಮಗಳು ಇದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಅತ್ಯಾಚಾರ ಘಟನೆಯು ಸಂತ್ರಸ್ತೆಯ ಒಡೆತನದ ಜಮೀನು ಮಾರಾಟಕ್ಕೆ ಸಂಬಂಧಿಸಿದ್ದಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


