ಸುಮ್ನೆ ಮಾತಾಡೋದು ಬೇಡ; ಹೈದರಾಬಾದ್ ನಲ್ಲಿ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್ ಗಾಂಧಿಗೆ ಓವೈಸಿ ಸವಾಲು
ಈ ಬಾರಿ ವಯನಾಡ್ ಅಲ್ಲ, ಈ ಬಾರಿ ಹೈದರಾಬಾದ್‌ನಿಂದ ಸ್ಪರ್ಧಿಸಿ ತೋರಿಸಿ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸವಾಲೆಸೆದಿದ್ದಾರೆ.

ಹೈದರಾಬಾದ್: ಈ ಬಾರಿ ವಯನಾಡ್ ಅಲ್ಲ, ಈ ಬಾರಿ ಹೈದರಾಬಾದ್‌ನಿಂದ ಸ್ಪರ್ಧಿಸಿ ತೋರಿಸಿ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸವಾಲೆಸೆದಿದ್ದಾರೆ.
ತಮ್ಮ ಸಂಸದೀಯ ಕ್ಷೇತ್ರವಾದ ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಭಾನುವಾರ ಈ ಸವಾಲು ಹಾಕಿದ್ದಾರೆ. ಅಲ್ಲದೆ, ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಬಾಬರಿ ಮಸೀದಿಯನ್ನು ಕಾಂಗ್ರೆಸ್ ಆಡಳಿತದಲ್ಲೇ ಕೆಡವಲಾಯ್ತು ಎಂದು ಕೈ ಪಕ್ಷದ ವಿರುದ್ಧ ಟೀಕೆ ಮಾಡಿದ್ದಾರೆ.
ನಾನು ನಿಮ್ಮ ನಾಯಕನಿಗೆ (ರಾಹುಲ್ ಗಾಂಧಿ) ಹೈದರಾಬಾದ್‌ನಿಂದ ಚುನಾವಣೆಗೆ ಸ್ಪರ್ಧಿಸಲು ಸವಾಲು ಹಾಕುತ್ತಿದ್ದೇನೆ ಮತ್ತು ವಯನಾಡ್‌ನಿಂದ ಅಲ್ಲ. ನೀವು ದೊಡ್ಡ ದೊಡ್ಡ ಹೇಳಿಕೆಗಳನ್ನು ನೀಡುತ್ತಿರುತ್ತೀರಿ, ಮೈದಾನಕ್ಕೆ ಬಂದು ನನ್ನ ವಿರುದ್ಧ ಹೋರಾಡಿ. ಕಾಂಗ್ರೆಸ್‌ನ ಜನರು ಬಹಳಷ್ಟು ಹೇಳುತ್ತಾರೆ, ಆದರೆ ನಾನು ಸಿದ್ಧ. .ಕಾಂಗ್ರೆಸ್ ಆಡಳಿತದಲ್ಲಿ ಬಾಬ್ರಿ ಮಸೀದಿ ಮತ್ತು ಸೆಕ್ರೆಟರಿಯೇಟ್ ಮಸೀದಿಯನ್ನು ಕೆಡವಲಾಯಿತು.." ಎಂದು ಅಸಾದುದ್ದೀನ್ ಓವೈಸಿ ಹೇಳಿದರು.
ತೆಲಂಗಾಣದಲ್ಲಿ ಈ ವರ್ಷಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಚುಕ್ಕಾಣಿ ಹಿಡಿಯಲು ಎರಡೂ ಪಕ್ಷಗಳು ಹವಣಿಸುತ್ತಿರುವುದರಿಂದ ಕಾಂಗ್ರೆಸ್ ಮತ್ತು ಎಐಎಂಐಎಂ ನಡುವೆ ಭಿನ್ನಾಭಿಪ್ರಾಯ ಉಂಟಾಗಿದೆ.
ಈ ತಿಂಗಳ ಆರಂಭದಲ್ಲಿ ತೆಲಂಗಾಣದ ತುಕ್ಕುಗುಡದಲ್ಲಿ ನಡೆದ ವಿಜಯಭೇರಿ ಸಭೆಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ತೆಲಂಗಾಣದಲ್ಲಿ ಭಾರತೀಯ ಜನತಾ ಪಕ್ಷ, ಭಾರತ್ ರಾಷ್ಟ್ರ ಸಮಿತಿ ಮತ್ತು ಎಐಎಂಐಎಂ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿವೆ ಮತ್ತು ತಮ್ಮ ಪಕ್ಷವು ಈ ತ್ರಿಕೂಟದ ವಿರುದ್ಧ ಹೋರಾಡುತ್ತಿದೆ ಎಂದಿದ್ದರು.
ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವು ಬಿಆರ್‌ಎಸ್ ವಿರುದ್ಧ ಹೋರಾಡುತ್ತಿಲ್ಲ, ಆದರೆ ಬಿಆರ್‌ಎಸ್, ಬಿಜೆಪಿ ಮತ್ತು ಎಐಎಂಐಎಂ ಜೊತೆಗೂಡಿ ಹೋರಾಡುತ್ತಿದೆ. ಅವರು ತಮ್ಮನ್ನು ಬೇರೆ ಬೇರೆ ಪಕ್ಷಗಳೆಂದು ಕರೆದುಕೊಳ್ಳುತ್ತಾರೆ. ಆದರೆ ಅವರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


