ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳ ಹತ್ಯೆ; ಭಾರೀ ಪ್ರತಿಭಟನೆ, ಮತ್ತೆ ಇಂಟರ್ನೆಟ್ ಸೇವೆ ಸ್ಥಗಿತ
ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಗುವಾಹಟಿ: ಮಣಿಪುರದ ರಾಜಧಾನಿ ಇಂಫಾಲ್‌ನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮಂಗಳವಾರ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
17 ವರ್ಷದ ಬಾಲಕಿ ಹಿಜಾಮ್ ಲಿಂಥೋಯಿಂಗಂಬಿ ಮತ್ತು 20 ವರ್ಷದ ಫಿಜಾಮ್ ಹೆಮ್‌ಜಿತ್ ಅವರ ಮೃತದೇಹದ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿದರು.
ಇದನ್ನು ಓದಿ: ಮಣಿಪುರದಲ್ಲಿ ಸೇನಾ ಯೋಧನನ್ನು ಅಪಹರಿಸಿ ಹತ್ಯೆ
ಇಬ್ಬರು ವಿದ್ಯಾರ್ಥಿಗಳು ಶಸ್ತ್ರಸಜ್ಜಿತ ಇಬ್ಬರು ವ್ಯಕ್ತಿಗಳೊಂದಿಗೆ ಇರುವ ಒಂದು ಫೋಟೋ ಹಾಗೂ ಮೃತ ದೇಹ ಇರುವ ಇನ್ನೊಂದು ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.
ವಿದ್ಯಾರ್ಥಿಗಳ ಹತ್ಯೆಯನ್ನು ಖಂಡಿಸಿ ಮತ್ತು ಕೊಲೆಯಾದ ಇಬ್ಬರಿಗೆ ನ್ಯಾಯಕ್ಕಾಗಿ ಒತ್ತಾಯಿಸಿ ಇಂದು ಸಾವಿರಾರು ವಿದ್ಯಾರ್ಥಿಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಅಲ್ಲದೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಪ್ರಯತ್ನಿಸಿದಾಗ, ಅವರನ್ನು ಚದುರಿಸಲು ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿ ಅಶ್ರುವಾಯು ಶೆಲ್ ಮತ್ತು ಹೊಗೆ ಬಾಂಬ್‌ಗಳನ್ನು ಸಿಡಿಸಿದರು.
ಘಟನೆಯಲ್ಲಿ 50 ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಅವರನ್ನು ಕೆಲವು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಕೊನೆಯದಾಗಿ ವರದಿ ಬಂದಾಗ ಪರಿಸ್ಥಿತಿ ಉದ್ವಿಗ್ನವಾಗಿತ್ತು.
ಈ ಹಿನ್ನೆಯಲ್ಲಿ ಮಣಿಪುರ ಸರ್ಕಾರ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮತ್ತೆ ಮೊಬೈಲ್ ಇಂಟರ್ನೆಟ್ ಡೇಟಾ ಸೇವೆಗಳು, VPN ಮೂಲಕ ಇಂಟರ್ನೆಟ್ / ಡೇಟಾ ಸೇವೆಗಳನ್ನು ರಾಜ್ಯದಲ್ಲಿ ಐದು ದಿನಗಳ ಕಾಲ ಅಂದರೆ ಅಕ್ಟೋಬರ್ 1 ರವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


