ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನಲ್ಲಿ ಸ್ಫೋಟ; ಎಂಟು ಕಾರ್ಮಿಕರಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆದಾಗ್ಯೂ, ಪೊಲೀಸರು ಸ್ಫೋಟದ ಯಾವುದೇ ಭಯೋತ್ಪಾದಕರ ಕೈವಾಡವಿರುವುದನ್ನು ತಳ್ಳಿಹಾಕಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಸ್ಫೋಟದಲ್ಲಿ ಎಂಟು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದಾಗ್ಯೂ, ಪೊಲೀಸರು ಸ್ಫೋಟದ ಹಿಂದೆ ಯಾವುದೇ ಭಯೋತ್ಪಾದಕರ ಕೈವಾಡವಿರುವುದನ್ನು ತಳ್ಳಿಹಾಕಿದ್ದಾರೆ. ಕಾಂಕ್ರೀಟ್ ಕಂಪನ ಯಂತ್ರ, ಪೋರ್ಟಬಲ್ ಜನರೇಟರ್ ಮತ್ತು ಎಣ್ಣೆಯ ಕ್ಯಾನ್ ಅನ್ನು ಸಾಗಿಸುತ್ತಿದ್ದ 'ಲೋಡ್ ಕ್ಯಾರಿಯರ್' ವಾಹನದಲ್ಲಿ ಸ್ಫೋಟ ಸಂಭವಿಸಿದೆ ಎಂದಿದ್ದಾರೆ.
'ಅನಂತನಾಗ್‌ನ ಲಾರ್ಕಿಪೋರಾದಲ್ಲಿ ಕಾರ್ಮಿಕರೊಂದಿಗೆ ಸಾಗಿಸುತ್ತಿದ್ದ ಸಿಮೆಂಟ್ ಮಿಶ್ರಣ ಮಾಡುವ ಕಂಪನ ಯಂತ್ರ, ಪೋರ್ಟಬಲ್ ಜನರೇಟರ್ ಮತ್ತು ಎಣ್ಣೆಯಿದ್ದ ಟಿನ್ ಕ್ಯಾನ್ ಇದ್ದ ಲೋಡ್ ಕ್ಯಾರಿಯರ್ ವಾಹನದಲ್ಲಿ ಸ್ಫೋಟ ಸಂಭವಿಸಿದೆ' ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಎಂಟು ಕಾರ್ಮಿಕರಿಗೆ ಸುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪರಿಸ್ಥಿತಿ ಸ್ಥಿರವಾಗಿದ್ದು, ಘಟನೆಯ ಹಿಂದೆ ಯಾವುದೇ ಭಯೋತ್ಪಾದಕರ ಕೈವಾಡವಿಲ್ಲ. ಈ ಸಂಬಂಧ ಹೆಚ್ಚಿನ ತನಿಖೆ ಪ್ರಾರಂಭವಾಗಿದೆ ಎಂದು ಪೋಲಿಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


