ಕರ್ಫ್ಯೂ ಉಲ್ಲಂಘಿಸಿ ಮಣಿಪುರ ಸಿಎಂ ಮನೆ ಮೇಲೆ ದಾಳಿಗೆ ಗುಂಪು ಯತ್ನ; ಭದ್ರತಾ ಪಡೆಗಳಿಂದ ತಡೆ
ಮಣಿಪುರದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು, ಕರ್ಫ್ಯೂ ಉಲ್ಲಂಘನೆ ಮಾಡಿ ಸಿಎಂ ಮನೆ ಮೇಲೆ ದಾಳಿಗೆ ಗುಂಪೊಂದು ಯತ್ನಿಸಿದೆ. ಆದರೆ ಭದ್ರತಾ ಪಡೆಗಳು ಈ ಯತ್ನವನ್ನು ವಿಫಲಗೊಳಿಸಿವೆ.

ಇಂಫಾಲ: ಮಣಿಪುರದಲ್ಲಿ ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದು, ಕರ್ಫ್ಯೂ ಉಲ್ಲಂಘನೆ ಮಾಡಿ ಸಿಎಂ ಮನೆ ಮೇಲೆ ದಾಳಿಗೆ ಗುಂಪೊಂದು ಯತ್ನಿಸಿದೆ. ಆದರೆ ಭದ್ರತಾ ಪಡೆಗಳು ಈ ಯತ್ನವನ್ನು ವಿಫಲಗೊಳಿಸಿವೆ.
ಇಂಫಾಲದಲ್ಲಿರುವ ಸಿಎಂ ಬಿರೇನ್ ಸಿಂಗ್ ಅವರ ಪೂರ್ವಜರ ಮನೆ ಮೇಲೆ ದಾಳಿ ಯತ್ನ ನಡೆದಿದ್ದು, ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಅಧಿಕಾರಿಗಳು ಯತ್ನವನ್ನು ವಿಫಲಗೊಳಿಸಿದ್ದಾರೆ.
ಘಟನೆ ನಡೆದಾಗ ಸಿಎಂ ತಮ್ಮ ಗೃಹ ಕಚೇರಿಯಲ್ಲಿದ್ದರು. ಮನೆಯಿಂದ 100-150 ಮೀಟರ್ ದೂರದಲ್ಲೇ ಭದ್ರತಾ ಪಡೆಗಳು ಗುಂಪನ್ನು ತಡೆದಿದೆ.
ಗುಂಪನ್ನು ಚದುರಿಸಲು ರಾಜ್ಯ ಪೊಲೀಸ್ ಸಿಬ್ಬಂದಿ ಹಾಗೂ ಆರ್ ಎಫ್ ಅಶ್ರುವಾಯುವನ್ನು ಪ್ರಯೋಗಿಸಿದ್ದಾರೆ. ಅಧಿಕಾರಿಗಳು ಇಡೀ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದರು. ಮನೆಯ ಬಳಿ ಹಿಂದಿನ ಬ್ಯಾರಿಕೇಡ್‌ಗಳಿಗೆ ಹೆಚ್ಚಿನ ಬ್ಯಾರಿಕೇಡ್‌ಗಳನ್ನು ನಿಯೋಜಿಸಲಾಯಿತು. ಪ್ರತಿಭಟನಾಕಾರರು ರಸ್ತೆಯ ಮಧ್ಯದಲ್ಲಿ ಟೈರ್‌ಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.
ಮಣಿಪುರದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪುರದಲ್ಲಿ ಪ್ರತಿಭಟನೆಗಳು ತೋವ್ರಗೊಂಡಿದೆ.
ಇದಕ್ಕೂ ಮುನ್ನ ಇಂಫಾಲದ ಪಶ್ಚಿಮ ಜಿಲ್ಲೆಯಲ್ಲಿ ಡಿಸಿ ಕಚೇರಿಯನ್ನು ಪ್ರತಿಭಟನಾನಿರತರು ಧ್ವಂಸಗೊಳಿಸಿ, ವಾಹನಗಳಿಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


