30 ರೂಪಾಯಿಗೆ ಮೂವರ ನಡುವೆ ಜಗಳ, 17 ವರ್ಷದ ವಿದ್ಯಾರ್ಥಿಯ ಕೊಲೆ!
30 ರೂಪಾಯಿಗಾಗಿ ಮೂವರ ನಡುವೆ ಉಂಟಾದ ಜಗಳ 17 ವರ್ಷದ ವಿದ್ಯಾರ್ಥಿಯ ಹತ್ಯೆಯೊಂದಿಗೆ ಅಂತ್ಯವಾಗಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ ಗ್ರಾಮದಲ್ಲಿ ನಡೆದಿದೆ.

ಲಖನೌ: 30 ರೂಪಾಯಿಗಾಗಿ ಮೂವರ ನಡುವೆ ಉಂಟಾದ ಜಗಳ 17 ವರ್ಷದ ವಿದ್ಯಾರ್ಥಿಯ ಹತ್ಯೆಯೊಂದಿಗೆ ಅಂತ್ಯವಾಗಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ ಗ್ರಾಮದಲ್ಲಿ ನಡೆದಿದೆ. ಬರೌತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಆರೋಪಿಗಳು 11 ನೇ ತರಗತಿ ವಿದ್ಯಾರ್ಥಿಯ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತನನ್ನು ಕೆಎಚ್‌ಆರ್ ಇಂಟರ್ ಕಾಲೇಜಿನ ವಿದ್ಯಾರ್ಥಿ ಹೃತಿಕ್ ಎಂದು ಗುರುತಿಸಲಾಗಿದೆ. 30 ರೂಪಾಯಿಗೆ ಜಗಳ ಉಂಟಾಗಿ ಕೊಲೆಯಾಗಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಬರೌತ್ ಪೊಲೀಸ್ ಠಾಣಾಧಿಕಾರಿ ದೇವೇಶ್ ಕುಮಾರ್ ಸಿಂಗ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
30 ರೂಪಾಯಿ ವ್ಯವಹಾರಕ್ಕೆ ಸಂಬಂಧಿಸಿದಂತೆ ಹೃತ್ತಿಕ್ ಅದೇ ಗ್ರಾಮದ ಮೂವರೊಂದಿಗೆ ಜಗಳವಾಡಿದ್ದು, ಆರೋಪಿಗಳು ಕತ್ತು ಹಿಸುಕಿ ಸಾಯಿಸಿದ್ದಾರೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ.
ಆರೋಪಿಗಳು ಹೃತಿಕ್ ಗೆ ಪರಿಚಿತರಾಗಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ಎಫ್‌ಐಆರ್ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


