ಐಐಟಿ ಮದ್ರಾಸ್ ವಿದ್ಯಾರ್ಥಿ ಆತ್ಮಹತ್ಯೆ: ಈ ವರ್ಷದಲ್ಲಿ ಮೂರನೇ ಪ್ರಕರಣ
ಮದ್ರಾಸ್ ನ ಭಾರತೀಯ ತಂತ್ರಜ್ಞಾನ ಸಂಸ್ಥೆ -ಐಐಟಿಯ ಪಿಹೆಚ್ ಡಿ ವಿದ್ಯಾರ್ಥಿಯೊಬ್ಬ ತಮಿಳುನಾಡಿನ ವಲಚೇರಿಯಲ್ಲಿರುವ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.

ವಲಚೇರಿ: ಮದ್ರಾಸ್ ನ ಭಾರತೀಯ ತಂತ್ರಜ್ಞಾನ ಸಂಸ್ಥೆ -ಐಐಟಿಯ ಪಿಹೆಚ್ ಡಿ ವಿದ್ಯಾರ್ಥಿಯೊಬ್ಬ ತಮಿಳುನಾಡಿನ ವಲಚೇರಿಯಲ್ಲಿರುವ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.
ಪಶ್ಚಿಮ ಬಂಗಾಳದ 32 ವರ್ಷದ ವಿದ್ಯಾರ್ಥಿ ಮೃತಪಟ್ಟಿದ್ದು, ಈ ವರ್ಷದಲ್ಲಿ ಇದು ಐಐಟಿ ಮದ್ರಾಸ್ ನಲ್ಲಿ ಸಂಭವಿಸಿದ ಮೂರನೇ ಪ್ರಕರಣವಾಗಿದೆ. 2018ರಿಂದ ಒಟ್ಟು 11 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.
'' ನನ್ನನ್ನು ಕ್ಷಮಿಸಿ, ಚೆನ್ನಾಗಿಲ್ಲ ಅಂತಾ ಮಾರ್ಚ್ 1 ರಂದು ಮೃತ ವಿದ್ಯಾರ್ಥಿ ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡಿದ್ದ. ಈ ಸ್ಟೇಟಸ್ ನೋಡಿದ ಆತನ ಸ್ನೇಹಿತರು, ಆತನ ಮನೆಗೆ ಹೋದಾಗ, ಸಚಿನ್ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದ. ಈ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ರಾಯಪೇಟೆ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಸಾವಿನ ಕುರಿತು ಐಐಟಿ ಮದ್ರಾಸ್ ಸಂತಾಪ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


