ದೇಶ

'ಇದಕ್ಕೆಲ್ಲ ಸೊಪ್ಪಾಕಲ್ಲ'; ಅರುಣಾಚಲ ಪ್ರದೇಶ ಸ್ಥಳಗಳ ಮರುನಾಮಕರಣ, ಚೀನಾ ನಡೆ ತಿರಸ್ಕರಿಸಿದ ಭಾರತ

ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಚೀನಾ ಮರುನಾಮಕರಣವನ್ನು ಭಾರತ ಸರ್ಕಾರ ಮಂಗಳವಾರ ಸಾರಾಸಗಟಾಗಿ ತಿರಸ್ಕರಿಸಿದ್ದು, ಅರುಣಾಚಲ ಪ್ರದೇಶ ರಾಜ್ಯವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಎಂದು ಪ್ರತಿಪಾದಿಸಿದೆ.

'ಇದಕ್ಕೆಲ್ಲ ಸೊಪ್ಪಾಕಲ್ಲ'; ಅರುಣಾಚಲ ಪ್ರದೇಶ ಸ್ಥಳಗಳ ಮರುನಾಮಕರಣ, ಚೀನಾ ನಡೆ ತಿರಸ್ಕರಿಸಿದ ಭಾರತ
ಕೇಂದ್ರ ವಿದೇಶಾಂಗ ವಕ್ತಾರ ಅರಿಂದಮ್ ಬಾಗ್ಚಿ
Published On :

ನವದೆಹಲಿ: ಅರುಣಾಚಲ ಪ್ರದೇಶದ ಕೆಲವು ಸ್ಥಳಗಳ ಚೀನಾ ಮರುನಾಮಕರಣವನ್ನು ಭಾರತ ಸರ್ಕಾರ ಮಂಗಳವಾರ ಸಾರಾಸಗಟಾಗಿ ತಿರಸ್ಕರಿಸಿದ್ದು, ಅರುಣಾಚಲ ಪ್ರದೇಶ ರಾಜ್ಯವು ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಎಂದು ಪ್ರತಿಪಾದಿಸಿದೆ.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ "ಆವಿಷ್ಕರಿಸಿದ ಹೆಸರುಗಳನ್ನು" ನಿಯೋಜಿಸುವ ಪ್ರಯತ್ನಗಳು ಹಾಲಿ ವಾಸ್ತವತೆಯನ್ನು ಬದಲಾಯಿಸುವುದಿಲ್ಲ ಎಂದು ಹೇಳಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, 'ನಾವು ಇಂತಹ ವರದಿಗಳನ್ನು ನೋಡಿದ್ದೇವೆ. ಚೀನಾ ಇಂತಹ ಪ್ರಯತ್ನ ಮಾಡಿರುವುದು ಇದೇ ಮೊದಲಲ್ಲ. ನಾವು ಇದನ್ನು ಸಾರಾಸಗಟಾಗಿ ತಿರಸ್ಕರಿಸುತ್ತೇವೆ" ಎಂದು ಬಾಗ್ಚಿ ಹೇಳಿದ್ದಾರೆ.

"ಅರುಣಾಚಲ ಪ್ರದೇಶವು ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ. ಚೀನಾ ಆವಿಷ್ಕರಿಸಿದ ಹೆಸರುಗಳನ್ನು ನಿಯೋಜಿಸುವ ಪ್ರಯತ್ನಗಳು ಈ ವಾಸ್ತವತೆಯನ್ನು ಬದಲಾಯಿಸುವುದಿಲ್ಲ" ಎಂದು ಅವರು ಹೇಳಿದ್ದಾರೆ.

ಅರುಣಾಚಲ ಪ್ರದೇಶದ ಕೆಲವು ಸ್ಥಳಗಳನ್ನು ಚೀನಾ ಮರುನಾಮಕರಣ ಮಾಡುವ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ ಅವರು ಟ್ವೀಟ್ ಮೂಲಕ ಹೇಳಿಕೆ ನೀಡಿದ್ದಾರೆ. 

ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಅರುಣಾಚಲ ಪ್ರದೇಶದ 11 ಸ್ಥಳಗಳ ಪ್ರಮಾಣಿತ ಹೆಸರುಗಳನ್ನು ಭಾನುವಾರ ಬಿಡುಗಡೆ ಮಾಡಿತ್ತು. ಇದನ್ನು "ಜಂಗ್ನಾನ್, ಟಿಬೆಟ್‌ನ ದಕ್ಷಿಣ ಭಾಗ" ಎಂದು ಚೀನಾ ಕರೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.