ದೆಹಲಿ ಅಬಕಾರಿ ಹಗರಣ: 3ನೇ ಚಾರ್ಜ್ ಶೀಟ್ ಸಲ್ಲಿಸಿದ ಇಡಿ; ಸಿಸೋಡಿಯಾ, ಕವಿತಾ ಹೆಸರು ಇಲ್ಲ
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಮೂರನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ಇದರಲ್ಲೂ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಬಿಎಸ್ ಆರ್ ನಾಯಕಿ...

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಗುರುವಾರ ಮೂರನೇ ಚಾರ್ಜ್‌ಶೀಟ್ ಸಲ್ಲಿಸಿದ್ದು, ಇದರಲ್ಲೂ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಹಾಗೂ ಬಿಎಸ್ ಆರ್ ನಾಯಕಿ ಕವಿತಾ ಅವರನ್ನು ಹೆಸರನ್ನು ಉಲ್ಲೇಖಿಸಿಲ್ಲ.
ಕಿಕ್ ಬ್ಯಾಕ್ ಹಣಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದ್ದು, ‘ಮದ್ಯ ಲಾಬಿ’ಯ ಪರವಾದ ನೀತಿಗಾಗಿ ವಿವಿಧ ಮಧ್ಯವರ್ತಿಗಳಿಂದ ಹಣ ಪಡೆದು ಅದನ್ನು ಸರ್ಕಾರಿ ಅಧಿಕಾರಿಗಳು ಮತ್ತು ರಾಜಕಾರಣಿಗಳಿಗೆ ವಿಶೇಷವಾಗಿ ಎಎಪಿ ನಾಯಕರಿಗೆ ಲಂಚ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಇಂದು ಇಡಿ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರ ಹೆಸರಿಲ್ಲ.
ರೋಸ್ ಅವೆನ್ಯೂ ನ್ಯಾಯಾಲಯದ ಆವರಣದಲ್ಲಿರುವ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರಿಗೆ ಇಡಿ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ವೈಎಸ್‌ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ್ ಮಾಗುಂಟ, ಗೌತಮ್ ಮಲ್ಹೋತ್ರಾ ಮತ್ತು ರಾಜೇಶ್ ಜೋಶಿ ಅವರನ್ನು ಹೆಸರಿಸಲಾಗಿದೆ.
ಫೆಬ್ರವರಿ 7 ರಂದು ಮಲ್ಹೋಟಾ, ಫೆಬ್ರವರಿ 8 ರಂದು ಜೋಶಿ ಮತ್ತು ಫೆಬ್ರವರಿ 10 ರಂದು ಮಾಗುಂಟಾ ಅವರನ್ನು ಬಂಧಿಸಲಾಗಿದೆ ಎಂದು ಇಡಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.
ರೋಸ್ ಅವೆನ್ಯೂ ಕೋರ್ಟ್‌ನಲ್ಲಿರುವ ವಿಶೇಷ ನ್ಯಾಯಾಲಯವು ಏಪ್ರಿಲ್ 14 ರಂದು ಈ ಪ್ರಕರಣದ ವಿಚಾರಣೆ ನಡೆಸಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


