ವಿಪಕ್ಷಗಳಿಂದ ತೀವ್ರ ಗದ್ದಲ: ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಕೊನೆಯ ದಿನವಾದ ಗುರುವಾರ ಲೋಕಸಭೆ ಕಲಾಪವನ್ನು ಅನಿರ್ದಿಷ್ಠಾವಧಿಗೆ ಮುಂದೂಡಲಾಯಿತು.

ನವದೆಹಲಿ: ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳ ಸಂಸದರು ತೀವ್ರ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಂಸತ್ತಿನ ಬಜೆಟ್ ಅಧಿವೇಶನದ ಕೊನೆಯ ದಿನವಾದ ಗುರುವಾರ ಲೋಕಸಭೆ ಕಲಾಪವನ್ನು ಅನಿರ್ದಿಷ್ಠಾವಧಿಗೆ ಮುಂದೂಡಲಾಯಿತು.
ಅದಾನಿ ವಿಷಯದ ಬಗ್ಗೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದರೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಅವಮಾನಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕ್ಷಮಿಸಬೇಕೆಂದು ಆಗ್ರಹಿಸಿದರು. ಇದರಿಂದಾಗಿ ಬಜೆಟ್ ಅಧಿವೇಶನದ ಕೊನೆಯದಿನವಾದ ಇಂದು ಕಲಾಪಕ್ಕೆ ತೀವ್ರ ಅಡ್ಡಿಯುಂಟಾಯಿತು. ಇದರಿಂದಾಗಿ ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
ಇನ್ನು ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. ಪ್ರತಿಪಕ್ಷಗಳ ಘೋಷಣೆಗಳ ನಡುವೆಯೇ ರಾಜ್ಯಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ಈ ಮಧ್ಯೆ, ಪಕ್ಷದ 44ನೇ ಸಂಸ್ಥಾಪನಾ ದಿನ ಹಿನ್ನೆಲೆಯಲ್ಲಿ ಇಂದು ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


